ಮಂಡ್ಯ: ಹಣಕಾಸು ವಿಚಾರಕ್ಕೆ ಕಂಬಕ್ಕೆ ಕಟ್ಟಿಹಾಕಿ ಯುವಕನಿಗೆ ಥಳಿತ
ಹಲ್ಲೆಗೊಳಗಾದ ಯುವಕನನ್ನು ನಾಗೇಶ್ ಎಂದು ಗುರುತಿಸಲಾಗಿದೆ. ನಾಗೇಶ್ ಮತ್ತು ಅದೇ ಗ್ರಾಮದ ಚಲುವೇಶ್ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಣಕಾಸಿನ ವಿಚಾರಕ್ಕೆ ಯುವಕನನ್ನು ಸಾರ್ವಜನಿಕವಾಗಿ ಧ್ವಜ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.
ಹಲ್ಲೆಗೊಳಗಾದ ಯುವಕನನ್ನು ನಾಗೇಶ್ ಎಂದು ಗುರುತಿಸಲಾಗಿದೆ. ನಾಗೇಶ್ ಮತ್ತು ಅದೇ ಗ್ರಾಮದ ಚಲುವೇಶ್ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ ಎಂದು ವರದಿಯಾಗಿದೆ.
ಗ್ರಾಮಸ್ಥರ ಪ್ರಕಾರ, ನಾಗೇಶ್, ಚಲುವೇಶ್‌ಗೆ ಚಾಕುವಿನಿಂದ ಬೆದರಿಕೆ ಹಾಕಿದ್ದಾರೆ. ಇದರಿಂದ ಆಕ್ರೋಶಗೊಂಡ ಚಲುವೇಶ್ ಮತ್ತು ಅವರ ಸ್ನೇಹಿತರ ಗುಂಪು ನಾಗೇಶ್ ಅವರನ್ನು ಧ್ವಜ ಕಂಬಕ್ಕೆ ಕಟ್ಟಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನಾಗೇಶ್ ಕೈ ಮತ್ತು ಕಾಲುಗಳನ್ನು ಕಂಬಕ್ಕೆ ಕಟ್ಟಿ ಹಾಕಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಹಲವು ವ್ಯಕ್ತಿಗಳು ಸರದಿಯಂತೆ ನಾಗೇಶ್ ಗೆ ಕಪಾಳಮೋಕ್ಷ ಮಾಡಿದ್ದಾರೆ.
ಈ ವೇಳೆ ಕೆಲವು ವ್ಯಕ್ತಿಗಳು ನಾಗೇಶ್ ನನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದು ಸಹ ಕಂಡುಬರುತ್ತದೆ. ಒಬ್ಬ ವ್ಯಕ್ತಿ ಆತನಿಗೆ ನೀರು ನೀಡುವುದನ್ನು ಕಾಣಬಹುದು.
ಈ ಸಂಬಂಧ ನಾಗೇಶ್ ಅವರ ಪತ್ನಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



