ಯಾದಗಿರಿಯಲ್ಲಿ ಬೊಲೆರೊ-ಸಾರಿಗೆ ಬಸ್ ನಡುವೆ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು
ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಯಾದಗಿರಿ: ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎಯಲ್ಲಿ ಕಳೆದ ರಾತ್ರಿ ನಡೆದಿದೆ.
ಯಾದಗಿರಿ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವರ್ಕನಹಳ್ಳಿ ಗ್ರಾಮದವರಾದ ಬುಲೆರೊ ಚಾಲಕ ಶರಣಪ್ಪ(30ವ), ಸುನೀತಾ(19ವ), ಸೋಮವ್ವ(50ವ) ಮತ್ತು ತಂಗಮ್ಮ(55ವ) ಮೃತಪಟ್ಟವರಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬುಲೆರೋ ವಾಹನದಲ್ಲಿದ್ದ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


