ಮಂಗಳೂರು–ಉಡುಪಿ ನಡುವೆ ಮೆಟ್ರೊ ರೈಲು: ವರದಿಗೆ ಸೂಚನೆ
ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮಂಗಳೂರು–ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಆರಂಭಿಸುವ ಕುರಿತು ಕಾರ್ಯಸಾಧ್ಯತೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
ಹೌದು.. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ.
ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.
ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ ವರದಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.
ಅಲ್ಲದೆ ವಾಣಿಜ್ಯ ನಗರವಾಗಿರುವ ಮಂಗಳೂರಿನಲ್ಲಿ ಇರುವ ಸೌಲಭ್ಯ, ವೈದ್ಯಕೀಯ ಸೌಲಭ್ಯ, ಶಿಕ್ಷಣ ಸಂಸ್ಥೆಗಳು, ಕಡಲ ಕಿನಾರೆ ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಮೆಟ್ರೊ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಸಚಿವರು ತಿಳಿಸಿದ್ದಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಈ ಪತ್ರವನ್ನು ಜಿಲ್ಲಾಧಿಕಾರಿ ಪರವಾಗಿ ನಗರಾಭಿವೃದ್ಧಿ ಕೋಶವು, ಎನ್‌ಎಂಪಿಎ, ಎಂಆರ್‌ಪಿಎಲ್, ನಗರ ಪೊಲೀಸ್ ಕಮಿಷನರ್, ಎನ್‌ಐಟಿಕೆ, ಡಿಎಫ್‌ಒ, ಸಾರಿಗೆ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ರವಾಸೋದ್ಯಮ ಇಲಾಖೆ, ಆರೋಗ್ಯ ಇಲಾಖೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯನಿರ್ವಹಣಾಧಿಕಾರಿ, ಕೆನರಾ ವಾಣಿಜ್ಯೋದ್ಯಮ ಕೈಗಾರಿಕಾ ಸಂಘಕ್ಕೆ ಕಳುಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



