ರಾಜ್ಯ

ತುಮಕೂರು ರೈಲು ನಿಲ್ದಾಣಕ್ಕೆ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ!

ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ರೈಲು ನಿಲ್ದಾಣಕ್ಕೆ ಇಡಬೇಕು ಎಂಬುವುದು ಅಲ್ಲಿನ ಜನರ ಬಹುದಿನಗಳ ಒತ್ತಾಯವಾಗಿತ್ತು. ಅದಕ್ಕೆ ಕಾಲ ಕೂಡಿಬಂದಂತೆ ಕಾಣುತ್ತಿದೆ.

ತುಮಕೂರು ರೈಲು ನಿಲ್ದಾಣಕ್ಕೆ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ!
ಶಿವಕುಮಾರ ಸ್ವಾಮೀಜಿ
Published On :

ತುಮಕೂರು: ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ರೈಲು ನಿಲ್ದಾಣಕ್ಕೆ ಇಡಬೇಕು ಎಂಬುವುದು ಅಲ್ಲಿನ ಜನರ ಬಹುದಿನಗಳ ಒತ್ತಾಯವಾಗಿತ್ತು. ಅದಕ್ಕೆ ಕಾಲ ಕೂಡಿಬಂದಂತೆ ಕಾಣುತ್ತಿದೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ರೈಲ್ವೇ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. 89 ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲು ನಿಲ್ದಾಣ ನಿರ್ಮಾಣಕ್ಕೆ ಟೆಂಡರ್​ ಪೂರ್ಣಗೊಂಡಿದೆ. ಹೊಸ ರೈಲು ನಿಲ್ದಾಣ ನಿರ್ಮಾಣದ ಬಳಿಕ ತುಮಕೂರು ರೈಲು ನಿಲ್ದಾಣಕ್ಕೆ ಶ್ರೀಗಳ ಹೆಸರು ನಾಮಕರಣ ಮಾಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.