ಗೋಶಾಲೆಯಿಂದ ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳ ಸಾಗಣೆ: ಯತ್ನಾಳ್ ವಿರುದ್ಧ ಅಬ್ದುಲ್ ಹಮೀದ್ ಮುಶ್ರೀಫ್ ಗಂಭೀರ ಆರೋಪ
ನಗರ ಪಾಲಿಕೆ ವಶಪಡಿಸಿಕೊಂಡಿರುವ ಹೆಚ್ಚಿನ ಬಿಡಾಡಿ ದಕರುನಗಳನ್ನು ಕಗ್ಗೋಡು ಗ್ರಾಮದಲ್ಲಿರುವ ಯತ್ನಾಳ್ ಅವರ ಗೋಶಾಲೆಗೆ ಕಳುಹಿಸಲಾಗುತ್ತದೆ.

ವಿಜಯಪುರ: ಕಗ್ಗೋಡದಲ್ಲಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಗೋಶಾಲೆಯಿಂದ ಕಸಾಯಿಖಾಲೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದ್ದು, ದೊಡ್ಡ ಅವ್ಯವಹಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಶನಿವಾರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನಗರ ಪಾಲಿಕೆ ವಶಪಡಿಸಿಕೊಂಡಿರುವ ಹೆಚ್ಚಿನ ಬಿಡಾಡಿ ದಕರುನಗಳನ್ನು ಕಗ್ಗೋಡು ಗ್ರಾಮದಲ್ಲಿರುವ ಯತ್ನಾಳ್ ಅವರ ಗೋಶಾಲೆಗೆ ಕಳುಹಿಸಲಾಗುತ್ತದೆ. ಗೋಶಾಲೆಯಿಂದ ಯತ್ನಾಳ್ ಅವರು ಕಲಬುರಗಿಗೆ ಅಕ್ರಮವಾಗಿ ಕಸಾಯಿಖಾನೆಗೆ ಕಳುಹಿಸುವ ಮೂಲಕ ದೊಡ್ಡ ವ್ಯವಹಾರ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.
ಯತ್ನಾಳ್ ಅವರು ಆರೋಪ ನಿರಾಕರಿಸುವುದಾದರೆ, ಕಳೆದ 7-8 ವರ್ಷಗಳಿಂದ ಅವರ ಗೋಶಾಲೆಗೆ ಎಷ್ಟು ದನಕರುಗಳನ್ನು ಕಳುಹಿಸಲಾಗಿದೆ. ಅವುಗಳು ಏನಾದವು, ಎಲ್ಲಿಗೆ ಹೋದವು ಎಂಬುದರ ಕುರಿತು ದಾಖಲೆಗಳನ್ನು ನೀಡಲಿ ಎಂದು ಸವಾಲು ಹಾಕಿದರು. ಅಲ್ಲದೆ, ಈ ಬಗ್ಗೆ ತನಿಖೆಯಾಗಬೇಕೆಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



