ಧರ್ಮದ ಹೆಸರಲ್ಲಿ ರಾಜಕಾರಣ ನೀಚತನ; ಅವರವರ ಸಮಾಜವನ್ನು ಅವರೇ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ, ತಪ್ಪೇನು?: ಡಿ.ಕೆ ಶಿವಕುಮಾರ್
ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದೇವೆ.

ಬೆಂಗಳೂರು: ಬೆಂಗಳೂರು ಭಾವೈಕ್ಯತೆಯ ದೊಡ್ಡ ಸಂಕೇತ. ಕರಗ ಆಚರಣೆ ವೇಳೆ ದರ್ಗಾಕ್ಕೂ ಭೇಟಿ ನೀಡಲಾಗುತ್ತದೆ. ಧರ್ಮ, ದೇವಾಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡುವುದು ನೀಚತನ. ಇದನ್ನು ಯಾರೂ ಸಹ ಮಾಡಬಾರದು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದೇವೆ. ಅವರು ಯಾರಿಗೆ ಹಣ ನೀಡಬೇಕೋ ಅವರಿಗೆ ಹಣ ನೀಡುತ್ತಾರೆ. ಬಜೆಟ್ ಅಲ್ಲಿಯೇ ಹಣ ಮೀಲಿಟ್ಟಿದ್ದೇವೆ. ಕರಗ ಉತ್ಸವ ಚೆನ್ನಾಗಿ ನಡೆಯಲು ಜಿಲ್ಲಾಧಿಕಾರಿಗಳು, ಪೊಲೀಸರು ಶ್ರಮವಹಿಸಿದ್ದಾರೆ ಎಂದು ತಿಳಿಸಿದರು.
ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವು ಏಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರವಾಗಿ ಅವರುಗಳು ತಮ್ಮ ನಿಲುವುಗಳನ್ನು ಪ್ರತಿಪಾದನೆ ಮಾಡಲಿ ಎಂದು ಹೇಳಿದರು.
ಮುಖ್ಯಮಂತ್ರಿಗಳು ಜಾತಿಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ಮಾಡಲು ಸಾಧ್ಯ" ಎಂದರು. ಚುನಾವಣೆ ಪೂರ್ವದಲ್ಲಿ ಒಕ್ಕಲಿಗ ಸಮುದಾಯ ಬೆನ್ನಿಗೆ ನಿಲ್ಲಬೇಕು ಎಂದು ಈ ಹಿಂದೆ ನೀಡಿದ್ದ ಹೇಳಿಕೆ ಬಗ್ಗೆ ಕೇಳಿದಾಗ, "ಅದು ಬೇರೆ ವಿಚಾರ. ಈಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದೇನೆ. ಎಲ್ಲರಿಗೂ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ, ಧ್ವನಿ, ಧ್ಯೇಯ, ಉದ್ದೇಶ, ಸಂಕಲ್ಪ ಎಲ್ಲವೂ ಸಹ" ಎಂದರು. ಒಕ್ಕಲಿಗರ ಸಂಖ್ಯೆ 61 ಲಕ್ಷ ತೋರಿಸಲಾಗುತ್ತಿದೆ ಎಂದು ಕೇಳಿದಾಗ, "ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಷ್ಟೇ" ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



