ಮಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿಲ್ಲ, ನನ್ನನ್ನು ಮುಗಿಸಲು ಹೋದರೆ ಇಡೀ ರಾಜ್ಯ ಹೊತ್ತಿ ಉರಿಯಲಿದೆ: ಯತ್ನಾಳ್
ಮಾತಿನ ವೇಗದಲ್ಲಿ ತಪ್ಪಾಗಿದೆ. ನಾನು ಜಿನ್ನಾ ಅವರನ್ನು ಉಲ್ಲೇಖಿಸಲು ಬಯಸಿದ್ದೆ. ಆದರೆ, ಪ್ರವಾದಿ ಮುಹಮ್ಮದ್ ಅವರ ಹೆಸರು ಬಂದು ಬಿಟ್ಟಿತು. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನನ್ನ ಮಾತುಗಳನ್ನು ತಪ್ಪಾಗಿ ನಿರೂಪಿಸಿದೆ.

ಬೆಂಗಳೂರು: ನಾನು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿಲ್ಲ. ಮಹಮ್ಮದ್ ಅಲಿ ಜಿನ್ನಾ ಎನ್ನಲು ಹೋಗಿ ಮಾತಿನ ವೇಗದಲ್ಲಿ ತಪ್ಪಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾತಿನ ವೇಗದಲ್ಲಿ ತಪ್ಪಾಗಿದೆ. ನಾನು ಜಿನ್ನಾ ಅವರನ್ನು ಉಲ್ಲೇಖಿಸಲು ಬಯಸಿದ್ದೆ. ಆದರೆ, ಪ್ರವಾದಿ ಮುಹಮ್ಮದ್ ಅವರ ಹೆಸರು ಬಂದು ಬಿಟ್ಟಿತು. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನನ್ನ ಮಾತುಗಳನ್ನು ತಪ್ಪಾಗಿ ನಿರೂಪಿಸಿದೆ. ಇದು ಕೋಮು ಉದ್ವಿಗ್ನತೆಯನ್ನು ಹುಟ್ಟುಹಾಕುವ ಪ್ರಯತ್ನ. ವಿಜಯಪುರದಲ್ಲಿ ಗೂಂಡಾಗಿರಿ, ಹಫ್ತಾ ವಸೂಲಿ ಮಾಡಲು ಆಗದೇ ಹತಾಶರಾಗಿರುವ ಕಾಂಗ್ರೆಸಿಗರು ಪೈಗಂಬರ್‌ಗೆ ನೆಪ ಮಾಡಿಕೊಂಡು, ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ಮತ್ತೊಂದು ಧರ್ಮವನ್ನು ಹೀಯಾಳಿಸುವ ಸಂಸ್ಕೃತಿ ಇಲ್ಲ. ನಮ್ಮ ಗುರು, ಹಿರಿಯರು ಕಲಿಸಿಲ್ಲ ಎಂದು ಹೇಳಿದರು.
ನನ್ನನ್ನು ಮುಗಿಸುವುದಾಗಿ ಬೆದರಿಕೆ ಒಡ್ಡಿರುವ ಆಡಿಯೋ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ, ಇದರ ಹಿಂದೆ ಯಾರಿದ್ದಾರೆ ಎನ್ನುವುದು ಶೀಘ್ರ ಗೊತ್ತಾಗಲಿದೆ. ನನ್ನನ್ನು ಮುಗಿಸಲು ಯಾರಿಗೂ ಆಗಲ್ಲ, ಇಡೀ ಕರ್ನಾಟಕದ ಹಿಂದೂಗಳು ನನ್ನ ಜೊತೆ ಇದ್ದಾರೆ. ನನ್ನನ್ನು ಮುಗಿಸಲು ಹೋದರೆ ರಾಜ್ಯದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ತಿಳಿಸಿದರು.
ಬಿಜೆಪಿಯ ಜನಕ್ರೋಶ ಯಾತ್ರೆ ಕುರಿತು ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ. ಗ್ಯಾಸ್ ಮತ್ತು ಪೆಟ್ರೋಲ್ ಬೆಲೆಗಳು ಹೆಚ್ಚಾಗಿದೆ ಎಂದರು.
ಗುತ್ತಿಗೆದಾರರು ಕಾಂಗ್ರೆಸ್ ಸರ್ಕಾರ ಭಾರೀ ಕಮಿಷನ್ ಪಡೆದು ಬಿಲ್‌ಗಳನ್ನು ತೆರವುಗೊಳಿಸುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಲಿ, ಸತ್ಯಾಂಶ ಹೊರಬರಲಿ ಎಂದು ಹೇಳಿದರು. ಜಾತಿ ಜನಗಣತಿ ಸಮೀಕ್ಷೆಯನ್ನು ಟೀಕಿಸಿದ ಅವರು, ವರದಿ ದೋಷಪೂರಿತವಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



