384 ಗೆಜೆಟೆಡ್ ಪ್ರೊಬೇಷನರಿ ಹುದ್ದೆ: KAS ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ 3, 5, 7 ಮತ್ತು 9ರಂದು ನಡೆಸಲು ಕೆಪಿಎಸ್‌ಸಿ ನಿರ್ಧರಿಸಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.
ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ 3, 5, 7 ಮತ್ತು 9ರಂದು ನಡೆಸಲು ಕೆಪಿಎಸ್‌ಸಿ ನಿರ್ಧರಿಸಿದೆ.
ಅರ್ಹತಾ ಪರೀಕ್ಷೆ ಕನ್ನಡ ಮೇ 3 ರಂದು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಮತ್ತು ಇಂಗ್ಲಿಷ್ ಪರೀಕ್ಷೆ ಅದೇ ದಿನ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಡೆಯಲಿದೆ.
ಮುಖ್ಯ ಪರೀಕ್ಷೆಯ ವೇಳಾಪಟ್ಟಿ
ಮೇ 5 ರಂದು ಪತ್ರಿಕೆ - 1 (ಪ್ರಬಂಧ) ಬೆಳಗ್ಗೆ 10 ರಿಂದ 1 ಗಂಟೆಯವರೆಗೆ
ಮೇ 7 ರಂದು ಪತ್ರಿಕೆ - 2 (ಸಾಮಾನ್ಯ ಅಧ್ಯಯನ) ಬೆಳಗ್ಗೆ 9 ರಿಂದ 12
ಮೇ 7 ರಂದು ಪತ್ರಿಕೆ - 3 (ಸಾಮಾನ್ಯ ಅಧ್ಯಯನ-2) ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ
ಮೇ 9 ರಂದು ಪತ್ರಿಕೆ - 4 (ಸಾಮಾನ್ಯ ಅಧ್ಯಯನ-3) ಬೆಳಗ್ಗೆ 9 ರಿಂದ 12
ಮೇ 9 ರಂದು ಪತ್ರಿಕೆ - 5 (ಸಾಮಾನ್ಯ ಅಧ್ಯಯನ-4) ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ. ಈ ವೇಳಾಪಟ್ಟಿಯಲ್ಲಿ ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



