ರಾಯಚೂರು: ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿ, ನಾಲ್ವರು ಸಾವು
ಗೂಡ್ಸ್ ಪಿಕ್ ಅಪ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅದರ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜ್, ಸೋಮು, ನಾಗಭೂಷಣ ಹಾಗೂ ಮುರಳಿ ಎಂದು ಗುರುತಿಸಲಾಗಿದೆ.

ರಾಯಚೂರು: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ.
ಗೂಡ್ಸ್ ಪಿಕ್ ಅಪ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅದರ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜ್, ಸೋಮು, ನಾಗಭೂಷಣ ಹಾಗೂ ಮುರಳಿ ಎಂದು ಗುರುತಿಸಲಾಗಿದೆ.
ಮೃತರು ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳಾಗಿದ್ದಾರೆ. ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರ ಗಾಯವಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


