CET Exam ವೇಳೆ ಜನಿವಾರ ಬಿಚ್ಚಿಸಿದ ಪ್ರಕರಣ: ಸಾಯಿ ಸ್ಪೂರ್ತಿ ಕಾಲೇಜ್ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು!
ಬೀದರ್ನಲ್ಲಿರುವ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಚಂದ್ರಶೇಖರ ಬಿರಾದಾರ್ ಹಾಗೂ ಆ ಕಾಲೇಜಿನ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಅಮಾನತು ಮಾಡಲಾಗಿದೆ.

ಬೀದರ್: CET Exam ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ್ದ ಪ್ರಕರಣ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಬೀದರ್ ಜಿಲ್ಲಾಧಿಕಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದು ಅಧಿಕಾರದ್ದೇ ತಪ್ಪು ಎಂದು ಹೇಳಿದ್ದು ಬೀದರ್ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಮತ್ತು ಕೆಲವು ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಬೀದರ್ನಲ್ಲಿರುವ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಚಂದ್ರಶೇಖರ ಬಿರಾದಾರ್ ಹಾಗೂ ಆ ಕಾಲೇಜಿನ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಅಮಾನತು ಮಾಡಲಾಗಿದೆ. ಬೀದರ್ನ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಖಾಸಗೀ ಕಾಲೇಜಾಗಿರುವುದರಿಂದ ಹಾಗೂ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಈ ಆದೇಶ ಹೊರಡಿಸಲಾಗಿದೆ.
ಇದಕ್ಕೂ ಮುನ್ನ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿತರಾಗಿದ್ದ ಇಬ್ಬರು ಹೋಮ್ ಗಾರ್ಡ್ಸ್ ಗಳನ್ನು ಅಮಾನತು ಮಾಡಲಾಗಿತ್ತು. ರಾಜ್ಯ ಬ್ರಾಹ್ಮಣ ಸಭಾದ ನಟರಾಜ್ ಭಾಗವತ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



