ಅಶೋಕ್ ಹೇಳಿಕೆ ಹಾಸ್ಯಾಸ್ಪದ, ಜಾತಿಗಣತಿ ಮೂಲಪ್ರತಿ ನಮ್ಮ ಮನೆಯಲ್ಲಿ ಇರೋಕೆ ಹೇಗೆ ಸಾಧ್ಯ?: ಸಿಎಂ ಸಿದ್ದರಾಮಯ್ಯ ತಿರುಗೇಟು
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮತ್ತೊಮ್ಮೆ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ?

ಬೆಳಗಾವಿ: ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮತ್ತೊಮ್ಮೆ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜಾತಿ ಗಣತಿ ವರದಿಯ ಮೂಲಪ್ರತಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ' ಎಂಬ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮತ್ತೊಮ್ಮೆ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ? ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ. ಆದರೆ, ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆಂದು ಹೇಳಿದರು.
ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ, ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು, ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದರು.
ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ?
ಹಿಂದುಳಿದವರಿಗೆ, ಮುಸ್ಲಿಂಮರಿಗೆ ಮಾತ್ರವಲ್ಲದೆ ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು, ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ. ಇದು ಸಾಮಾಜಿಕ, ಶೈಕ್ಷಣಿಕ ಗಣತಿಯ ಆಶಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



