ಶಿಕ್ಷಣದಲ್ಲಿ ಜಾತಿ ತಾರತಮ್ಯ ತಡೆಗೆ ರಾಜ್ಯ ಸರ್ಕಾರ ಕ್ರಮ: ‘ರೋಹಿತ್ ವೇಮುಲ ಕಾಯ್ದೆ’ ಶೀಘ್ರದಲ್ಲೇ ಜಾರಿ
ರೋಹಿತ್, ಪಾಯಲ್, ದರ್ಶನ್ ಮತ್ತು ಘನತೆಗೆ ಅರ್ಹರಾದ ಅಸಂಖ್ಯಾತರ ಕನಸುಗಳನ್ನು ಗೌರವಿಸಲು ಕಾನೂನನ್ನು ಆದಷ್ಟು ಶೀಘ್ರ ಸಿದ್ಧಪಡಿಸಲಾಗುವುದು.

ಬೆಂಗಳೂರು: ಶಿಕ್ಷಣದಲ್ಲಿ ಜಾತಿ ತಾರತಮ್ಯ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ‘ರೋಹಿತ್ ವೇಮುಲ ಕಾಯ್ದೆ’ಯ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ.
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು. ಇದನ್ನು ಖಾತ್ರಿಪಡಿಸುವುದಕ್ಕಾಗಿ ʼರೋಹಿತ್ ವೇಮುಲಾ ಕಾಯ್ದೆʼ ಹೆಸರಿನ ಕಾನೂನನ್ನು ಕರ್ನಾಟಕದಲ್ಲೂ ರೂಪಿಸುವಂತೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪತ್ರದ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿಯವರೇ ನಿಮ್ಮ ಸಹಾನುಭೂತಿಯ ಪತ್ರ ಮತ್ತು ನ್ಯಾಯಕ್ಕಾಗಿ ಅಚಲ ಧ್ವನಿಗೆ ಧನ್ಯವಾದಗಳು. ಜಾತಿ, ವರ್ಗ ಅಥವಾ ಗುರುತಿನ ಹೆಸರಿನಲ್ಲಿ ಯಾವುದೇ ವಿದ್ಯಾರ್ಥಿ ಎಂದಿಗೂ ತಾರತಮ್ಯ ಅಥವಾ ಬಹಿಷ್ಕಾರವನ್ನು ಎದುರಿಸದಂತೆ ನೋಡಿಕೊಳ್ಳಲು ನಮ್ಮ ಸರಕಾರ ಬದ್ಧ ಎಂದು ಹೇಳಿದ್ದಾರೆ.
ರೋಹಿತ್, ಪಾಯಲ್, ದರ್ಶನ್ ಮತ್ತು ಘನತೆಗೆ ಅರ್ಹರಾದ ಅಸಂಖ್ಯಾತರ ಕನಸುಗಳನ್ನು ಗೌರವಿಸಲು ಕಾನೂನನ್ನು ಆದಷ್ಟು ಶೀಘ್ರ ಸಿದ್ಧಪಡಿಸಲಾಗುವುದು. ಬಿ.ಆರ್. ಅಂಬೇಡ್ಕರ್ ಅವರ ಸಮಾನ, ಸಹಾನುಭೂತಿಯ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ದಿಟ್ಟ ಹೆಜ್ಜೆ ಇಡಲಾಗುವುದು. ಆದಷ್ಟು ಬೇಗ ಈ ಕಾನೂನನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



