ರಾಜ್ಯ

BMIC ಯೋಜನೆ: ಏಳು ಸಚಿವರನ್ನೊಳಗೊಂಡ ಸಂಪುಟದ ಉಪ ಸಮಿತಿ ರಚನೆ

ಈ ಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗೆ ತನ್ನ ವರದಿ ನೀಡಲಿದೆ.

BMIC ಯೋಜನೆ: ಏಳು ಸಚಿವರನ್ನೊಳಗೊಂಡ ಸಂಪುಟದ ಉಪ ಸಮಿತಿ ರಚನೆ
BMIC ಯೋಜನೆ
Published On :

ಬೆಂಗಳೂರು: ಬೆಂಗಳೂರು- ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ ಅನುಷ್ಠಾನ ಕುರಿತು ಇದುವರೆಗೂ ಆಗಿರುವ ಪ್ರಗತಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಏಳು ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಮಿತಿಯ ಸದಸ್ಯರಾಗಿದ್ದಾರೆ.

ಈ ಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗೆ ತನ್ನ ವರದಿ ನೀಡಲಿದೆ. ಲೋಕೋಪಯೋಗಿ ಇಲಾಖೆಯು ಈ ಸಚಿವ ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.