ಬೆಂಗಳೂರು: ಅತಿಯಾದ ಶಿಸ್ತಿನ ಪಾಠದಿಂದ ಮಾನಸಿಕ ಕಿರಿಕಿರಿ; ತಾಯಿ ಜೊತೆ ಸೇರಿ ತಂದೆ ಹತ್ಯೆಗೈದ ಪುತ್ರ!
ಪುತ್ರ ಸಮೀರ್ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ. ಬೋಲು ಅರಬ್ ಶಿಸ್ತಿನ ವ್ಯಕ್ತಿಯಾಗಿದ್ದರು. ಪತ್ನಿ ಮತ್ತು ಪುತ್ರನಿಗೂ ಶಿಸ್ತಿನಿಂದ ಇರುವಂತೆ ಎಚ್ಚರಿಕೆ ನೀಡುತ್ತಿದ್ದರು.

ಬೆಂಗಳೂರು: ತಂದೆಯ ಅತಿಯಾದ ಶಿಸ್ತಿನ ಪಾಠಕ್ಕೆ ಬೇಸತ್ತ ಪುತ್ರನೊಬ್ಬ ತಾಯಿ ಜತೆ ಸೇರಿ ನಿವೃತ್ತ ಸೈನಿಕನನ್ನು ಹತ್ಯೆಗೈದಿರುವ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿವೇಕನಗರ ನಿವಾಸಿ ಬೋಲು ಅರಬ್ (47) ಕೊಲೆಯಾದ ಮಾಜಿ ಸೈನಿಕ. ಭಾನುವಾರ ಬೆಳಗ್ಗೆ ಸುಮಾರು 1.30ಕ್ಕೆ ದುರ್ಘಟನೆ ನಡೆದಿದೆ. ಈ ಸಂಬಂಧ ಮೃತನ ಪುತ್ರ ಸಮೀರ್(19) ಮತ್ತು ಪತ್ನಿ ತಬಸ್ಸುಮ್ (36) ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮಹಾರಾಷ್ಟ್ರ ಮೂಲದ ಬೋಲು ಅರಬ್ ನಿವೃತ್ತ ಸೈನಿಕರಾಗಿದ್ದು, 2003ರಲ್ಲಿ ತಬಸ್ಸುಮ್‌ರನ್ನು ಮದುವೆಯಾಗಿ ಪುತ್ರನ ಜತೆ ವಿವೇಕನಗರದಲ್ಲಿ ವಾಸವಾಗಿದ್ದರು. ಪುತ್ರ ಸಮೀರ್ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ. ಬೋಲು ಅರಬ್ ಶಿಸ್ತಿನ ವ್ಯಕ್ತಿಯಾಗಿದ್ದರು. ಪತ್ನಿ ಮತ್ತು ಪುತ್ರನಿಗೂ ಶಿಸ್ತಿನಿಂದ ಇರುವಂತೆ ಎಚ್ಚರಿಕೆ ನೀಡುತ್ತಿದ್ದರು.
ವಿನಾಕಾರಣ ಮನೆಯಿಂದ ಹೊರಗೆ ಹೋಗುವಂತಿಲ್ಲ. ಇಂತಿಷ್ಟೇ ಊಟ ಮಾಡಬೇಕೆಂದು ನಿಯಮ ಮಾಡಿದ್ದರು. ಈ ಅತಿಯಾದ ಶಿಸ್ತಿನಿಂದ ಪುತ್ರ ಮತ್ತು ಪತ್ನಿ ಬೇಸತ್ತಿದ್ದರು. ಹೀಗಾಗಿ ತಾಯಿ-ಮಗ ಸೇರಿ ಬೋಲು ಅರಬ್‌ನನ್ನು ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.
ಶನಿವಾರ ರಾತ್ರಿ ಊಟಕ್ಕೆ ನಿದ್ರೆ ಮಾತ್ರೆ ಬರೆಸಿ ಬೋಲು ಅರಬ್ ಗೆ ನೀಡಲಾಗಿತ್ತು. ಊಟ ಮಾಡಿದ ಬಳಿಕ ಬೋಲು ಅರಬ್ ಗಾಢ ನಿದ್ದೆಗೆ ಜಾರಿದಾಗ ಕೊಲೆ ಮಾಡಿದ್ದಾರೆ. ಬೋಲು ಅರಬ್ ಮೃತಪಟ್ಟಿರುವುದು ಖಚಿತವಾದ ಬಳಿಕ ಸಮೀರ್, 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಯಾರೋ ನಾಲ್ಕೈದು ಮಂದಿ ಮನೆಗೆ ನುಗ್ಗಿ ತಂದೆಯನ್ನು ಕೊಲೆ ಮಾಡಿ ಪರಾರಿಯಾದರು ಎಂದು ಹೇಳಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ತಾಯಿ-ಮಗನ ವರ್ತನೆ ಬಗ್ಗೆ ಅನುಮಾನಗೊಂಡು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಯಲಾಗಿದೆ. ಬಳಿಕ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



