ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ಕೈಗೆ ಕೊಟ್ಟ ಸಿಬ್ಬಂದಿ, ಕ್ರಮಕ್ಕೆ ಆಗ್ರಹ
ಕಳೆದೆರಡು ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿದ್ದ ಶಿವಮೊಗ್ಗ, ಬೀದರ್ ಜನಿವಾರದ ಸುದ್ದಿಗಳನ್ನು ಗಮನಿಸಿದ್ದ ಹುಡುಗ ತನಗಾಗಿದ್ದರ ಕುರಿತು ತನ್ನ ತಂದೆಗೆ ತಿಳಿಸಿದ್ದಾನೆ.

ಧಾರವಾಡ: ಶಿವಮೊಗ್ಗ, ಬೀದರ್ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.
ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದು, ಈ ವೇಳೆ ವಿದ್ಯಾರ್ಥಿಗಳ ತಪಾಸಣೆ ಮಾಡುವಾಗ ಪರೀಕ್ಷಾ ಕೇಂದ್ರದ ಸಿಬ್ಬಂದಿಯೊಬ್ಬರು ನಂದನ್ ಎಂಬ ಅಭ್ಯರ್ಥಿ ಹಾಕಿಕೊಂಡಿದ್ದ ಜನಿವಾರವನ್ನು ಗಮನಿಸಿದ್ದಾರೆ.
ಜನಿವಾರ ಹಾಕಿಕೊಂಡು ಪರೀಕ್ಷಾ ಕೇಂದ್ರದೊಳಗೆ ಹೋಗುವಂತಿಲ್ಲ ಎಂದು ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ನಾನು ಬ್ಯಾಗಿನೊಳಗೆ ಇಟ್ಟುಕೊಳ್ಳುತ್ತೇನೆ ಎಂದು ಹೇಳಿದ್ದಾನೆ. ಆದರೆ, ಅದಕ್ಕೂ ಅವಕಾಶ ನೀಡದೇ ಸಮಯವಿಲ್ಲ ಎಂದು ಜನಿವಾರವನ್ನು ಕತ್ತರಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಕಳೆದೆರಡು ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿದ್ದ ಶಿವಮೊಗ್ಗ, ಬೀದರ್ ಜನಿವಾರದ ಸುದ್ದಿಗಳನ್ನು ಗಮನಿಸಿದ್ದ ಹುಡುಗ ತನಗಾಗಿದ್ದರ ಕುರಿತು ತನ್ನ ತಂದೆಗೆ ತಿಳಿಸಿದ್ದಾನೆ.
ಇದನ್ನು ತಿಳಿದ ತಂದೆ ಆಕ್ರೋಶಗೊಂಡಿದ್ದು, ಇದೇ ಕಾರಣದಿಂದ ಮಗನಿಗೆ ಸರಿಯಾಗಿ ಪರೀಕ್ಷೆ ಬರೆಯಲು ಆಗಿಲ್ಲ ಎಂದು ಕಿಡಿಕಾರಿದ್ದಾರೆ.
ಘಟನೆ ಸಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಸಂತೋಷ್ ಲಾಡ್, ಇಂತಹ ಘಟನೆಗಳ ಬಗ್ಗೆ ಲಿಖಿತ ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವವರು ಸರ್ಕಾರಿ ಅಧಿಕಾರಿಗಳೋ ಅಥವಾ ಖಾಸಗಿ ಉದ್ಯೋಗಿಗಳೋ ಎಂಬುದು ಸ್ಪಷ್ಟವಾಗಿಲ್ಲ. ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಮತ್ತು ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



