ರಾಜ್ಯ

ಬೆಂಗಳೂರು: ಇದು ಕರ್ನಾಟಕನಾ? IAF ಅಧಿಕಾರಿ ಮೇಲೆ ಕನ್ನಡಿಗರಿಂದ ಹಲ್ಲೆ; ಕಿಡಿಕಾರಿದ ವಿಂಗ್ ಕಮಾಂಡರ್, Video!

ಬೆಂಗಳೂರಿನಲ್ಲಿ ಬೈಕ್‌ನಲ್ಲಿ ಹಿಂಬಾಲಿಸಿದ ಕನ್ನಡ ಮಾತನಾಡುವ ವ್ಯಕ್ತಿಗಳ ಗುಂಪೊಂದು ಐಎಎಫ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಇದು ಕರ್ನಾಟಕನಾ? IAF ಅಧಿಕಾರಿ ಮೇಲೆ ಕನ್ನಡಿಗರಿಂದ ಹಲ್ಲೆ; ಕಿಡಿಕಾರಿದ ವಿಂಗ್ ಕಮಾಂಡರ್, Video!
Published On :

ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್‌ನಲ್ಲಿ ಹಿಂಬಾಲಿಸಿದ ಕನ್ನಡ ಮಾತನಾಡುವ ವ್ಯಕ್ತಿಗಳ ಗುಂಪೊಂದು ಐಎಎಫ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ (IAF) ಅಧಿಕಾರಿ ಶಿಲಾದಿತ್ಯ ಬೋಸ್ ತಮ್ಮ ಪತ್ನಿಯೊಂದಿಗೆ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಸ್ಕ್ವಾಡ್ರನ್ ಲೀಡರ್ ಪತ್ನಿ ಮಧುಮಿತಾ ದತ್ತಾ ಅವರು ನೀಡಿದ ದೂರಿನ ಆಧಾರದ ಮೇಲೆ, ಅಪರಿಚಿತ ವ್ಯಕ್ತಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಬೆಳಿಗ್ಗೆ ಈ ಘಟನೆ ನಡೆದಿದ್ದು, ಮಧ್ಯಾಹ್ನದ ವೇಳೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಬೈಯಪ್ಪನಹಳ್ಳಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೂರ್ವ ವಿಭಾಗದ ಡಿಸಿಪಿ ಡಿ. ದೇವರಾಜ ತಿಳಿಸಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ನಡುವೆ ರಸ್ತೆಯಲ್ಲಿ ನಮ್ಮ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಆರೋಪಿಸಿದ್ದಾರೆ. ಗಾಯಗೊಂಡು ರಕ್ತ ಸುರಿಯುತ್ತಿರುವಾಗಲೇ ಬೋಸ್ ಅವರು ವಿಡಿಯೋ ಮಾಡಿದ್ದು ಘಟನೆ ಕುರಿತು ವಿವರಿಸಿದ್ದಾರೆ. ಅಲ್ಲದೆ ಆ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ನಾವು ಸಿವಿ ರಾಮನ್ ನಗರ ಹಂತ 1ರಲ್ಲಿ ಇರುವ ಡಿಆರ್‌ಡಿಒನಲ್ಲಿ ವಾಸಿಸುತ್ತಿದ್ದೇವೆ. ಇಂದು ಬೆಳಿಗ್ಗೆ, ನನ್ನ ಹೆಂಡತಿ ನನ್ನನ್ನು ವಿಮಾನ ನಿಲ್ದಾಣಕ್ಕೆ ಕರೆದೊಯ್ಯುತ್ತಿದ್ದಾಗ ಹಿಂದಿನಿಂದ ಬಂದ ಬೈಕ್ ನಮ್ಮ ಕಾರನ್ನು ಅಡ್ಡಗಟ್ಟಿತ್ತು. ನಾನು ಡ್ಯಾಶ್ ಕ್ಯಾಮ್ ದೃಶ್ಯಾವಳಿಯನ್ನು ಸಹ ಹಂಚಿಕೊಳ್ಳುತ್ತೇನೆ. ಸವಾರರಲ್ಲಿ ಒಬ್ಬರು ಕನ್ನಡದಲ್ಲಿ ನನ್ನನ್ನು ನಿಂದಿಸಲು ಪ್ರಾರಂಭಿಸಿದರು. ನನ್ನ ಕಾರಿನ ಮೇಲೆ ಡಿಆರ್‌ಡಿಒ ಸ್ಟಿಕ್ಕರ್ ಅನ್ನು ಗಮನಿಸಿ, 'ನೀವು ಡಿಆರ್‌ಡಿಒ ಜನರು' ಎಂದು ಹೇಳಿದರು. ನಂತರ ಕನ್ನಡದಲ್ಲಿ ಇನ್ನಷ್ಟು ನಿಂದನೆಗಳು ಮುಂದುವರೆದವು. ನಂತರ ಅವನು ನನ್ನ ಹೆಂಡತಿಯನ್ನು ನಿಂದಿಸಿದನು. ನನಗೆ ಅದನ್ನು ಸಹಿಸಲಾಗಲಿಲ್ಲ ಎಂದು ಅವರು ವೀಡಿಯೊದಲ್ಲಿ ಆರೋಪಿಸಿದ್ದಾರೆ.

ಹಲ್ಲೆಯನ್ನು ವಿವರಿಸುತ್ತಾ, ಬೋಸ್, ನಾನು ಕಾರಿನಿಂದ ಇಳಿದ ತಕ್ಷಣ, ಅವನು ತನ್ನ ಬೈಕ್ ಕೀನಿಂದ ನನ್ನ ಹಣೆಗೆ ಹೊಡೆದನು. ನಾನು ಅಲ್ಲಿಯೇ ನಿಂತು ಕೂಗುತ್ತಾ ಜನರು ಸೈನ್ಯ ಅಥವಾ ರಕ್ಷಣಾ ಪಡೆಗಳ ಯಾರನ್ನಾದರೂ ಹೀಗೆ ನಡೆಸಿಕೊಳ್ಳುತ್ತಾರೆಯೇ ಎಂದು ಕೇಳಿದೆ. ಈ ವೇಳೆ ಹೆಚ್ಚಿನ ಜನ ಸೇರಿದ್ದು ನಮ್ಮನ್ನೇ ನಿಂದಿಸಲು ಪ್ರಾರಂಭಿಸಿದರು. ಇನ್ನು ಅಷ್ಟಕ್ಕೆ ಸುಮ್ಮನಾಗದ ಆ ವ್ಯಕ್ತಿ ಕಲ್ಲನ್ನು ಎತ್ತಿಕೊಂಡು ನನ್ನ ಕಾರಿಗೆ ಹಾನಿ ಮಾಡಲು ಪ್ರಯತ್ನಿಸಿದನು. ನಾನು ಅವನನ್ನು ತಡೆಯಲು ಪ್ರಯತ್ನಿಸಿದಾಗ, ಅವನು ಮತ್ತೆ ನನಗೆ ಹೊಡೆದನು. ನನ್ನ ಮುಖದಿಂದ ರಕ್ತ ಸೋರುತ್ತಿರುವುದನ್ನು ನೋಡಬಹುದು. ಇದೇ ನಡೆದಿದ್ದು, ಅದೃಷ್ಟವಶಾತ್, ನನ್ನ ಹೆಂಡತಿ ನನ್ನನ್ನು ಅಲ್ಲಿಂದ ಕರೆದುಕೊಂಡು ಹೋದಳು.

ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಅಲ್ಲಿ ನಮಗೆ ತಕ್ಷಣದ ಸಹಾಯ ಸಿಗಲಿಲ್ಲ. ಕರ್ನಾಟಕ ಯಾಕೆ ಹೀಗಾಯಿತು. ನಾನು ಈ ಸ್ಥಿತಿಯನ್ನು ಕೇಳಿದ್ದೆ ಆದರೆ ಇಂದಿನ ಘಟನೆಯ ನಂತರ, ನಾನು ಆಘಾತಕ್ಕೊಳಗಾಗಿದ್ದೇನೆ. ದೇವರು ನಮಗೆ ಸಹಾಯ ಮಾಡಲಿ. ಪ್ರತೀಕಾರ ತೀರಿಸಿಕೊಳ್ಳದಿರಲು ದೇವರು ನನಗೆ ಶಕ್ತಿಯನ್ನು ನೀಡಲಿ. ಆದರೆ ಕಾನೂನು ಮತ್ತು ಸುವ್ಯವಸ್ಥೆ ವಿಫಲವಾದರೆ, ನಾನು ಪ್ರತೀಕಾರ ತೀರಿಸಿಕೊಳ್ಳುತ್ತೇನೆ ಎಂದು ಬೋಸ್ ವೀಡಿಯೊದಲ್ಲಿ ಆರೋಪಿಸಿದ್ದಾರೆ.

ನಿಖರವಾದ ಸ್ಥಳವನ್ನು ಇನ್ನೂ ಅಧಿಕೃತವಾಗಿ ದೃಢೀಕರಿಸಲಾಗಿಲ್ಲವಾದರೂ, ಸಿವಿ ರಾಮನ್ ನಗರದಿಂದ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ಘಟನೆ ಸಂಭವಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ. ನಂತರ ಪೋಸ್ಟ್ ಮಾಡಿದ ಎರಡನೇ ವೀಡಿಯೊದಲ್ಲಿ, ಬೋಸ್ ತನ್ನ ಅನಾರೋಗ್ಯ ಪೀಡಿತ ತಂದೆಯನ್ನು ಭೇಟಿ ಮಾಡಲು ಕೋಲ್ಕತ್ತಾಗೆ ಹೋಗುತ್ತಿದ್ದೇನೆ ಎಂದು ಬಹಿರಂಗಪಡಿಸಿದ್ದಾರೆ. ಹಲ್ಲೆಯನ್ನು "ಆಘಾತಕಾರಿ" ಘಟನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.