ಜಾತಿ ಗಣತಿ ವರದಿ ಮೂಲ ಪ್ರತಿ ಕಳವು ಆರೋಪ: ಮುಂದಿನ ಸಚಿವ ಸಂಪುಟದಲ್ಲಿ ರಾಜ್ಯ ಸರ್ಕಾರ ಚರ್ಚೆ?
ಈಗಾಗಲೇ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಸಚಿವರು ತಮ್ಮ ತಮ್ಮ ಸಮುದಾಯಗಳ ಕುರಿತು ಮಾತನಾಡಿತ್ತಾರೆ. ಇದೀಗ ಮತ್ತೊಮ್ಮೆ ಚರ್ಚೆಸಲಾಗುವುದು, ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರ ನಿರ್ಧಾರ ತೆಗೆದಕೊಳ್ಳಲಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಮುಂದಿನ ಸಚಿವ ಸಂಪುಟ ಸಭೆ ಮೇ.2ರಂದು ನಡೆಯಲಿದ್ದು, ಈ ಸಭೆಯಲ್ಲಿ ಜಾತಿ ಗಣತಿ ವರದಿಯ ಮೂಲ ಪ್ರತಿ ಕಳವು ಆರೋಪ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್ ಅವರು, "ಅನಗತ್ಯ ಆರೋಪಗಳನ್ನು ಮಾಡುವುದರಲ್ಲಿ ಅರ್ಥವಿಲ್ಲ. ಮೂಲ ವರದಿ ಇಲ್ಲದೆ ವರದಿಯನ್ನು ಸಿದ್ಧಪಡಿಸಲು ಹೇಗೆ ಸಾಧ್ಯ? ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು, ಇದು ಗಂಭೀರ ಆರೋಪವಾಗಿದ್ದು, ವಿಪಕ್ಷಗಳ ಆರೋಪ ಕುರಿಚು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಈಗಾಗಲೇ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಸಚಿವರು ತಮ್ಮ ತಮ್ಮ ಸಮುದಾಯಗಳ ಕುರಿತು ಮಾತನಾಡಿತ್ತಾರೆ. ಇದೀಗ ಮತ್ತೊಮ್ಮೆ ಚರ್ಚೆಸಲಾಗುವುದು, ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರ ನಿರ್ಧಾರ ತೆಗೆದಕೊಳ್ಳಲಿದೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಆರ್.ಅಶೋಕ್ ಅವರು ಸುಳ್ಳು ಹೇಳಬಾರದು. ಜಾತಿಗಣತಿ ವರದಿ ನಿಜವೇ ಸುಳ್ಳೇ, ನಕಲಿಯೇ ಎಂಬುದರ ಬಗ್ಗೆ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರನ್ನು ಕೇಳಲಿ ಅಥವಾ ಅಧಿಕಾರಿಯಾದ ದಯಾನಂದ್ ಅವರ ಬಳಿ ವಿಚಾರಿಸಿದರೆ ಉತ್ತರ ಸಿಗಬಹುದು ಎಂದು ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗ ಸ್ವಾಯತ್ತ ಸಂಸ್ಥೆ. ಸೀಲ್ ಮಾಡಿದ್ದ ವರದಿಯನ್ನು ಕ್ಯಾಬಿನೆಟ್ ಮುಂದೆ ತಂದು ಅಲ್ಲಿಯೇ ತೆರೆದು ನೋಡಲಾಯಿತು. ಇದನ್ನು ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜಾತಿಗಣತಿ ಅನುಷ್ಠಾನಕ್ಕೆ ಇನ್ನೂ ಒಂದು ವರ್ಷವಾಗಲಿದೆ ಎನ್ನುವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಕುರಿತು ಮಾತನಾಡಿ, “ಇದು ಆಂತರಿಕವಾಗಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ವಿಚಾರ. ಸಾರ್ವಜನಿಕವಾಗಿ ಚರ್ಚೆ ಮಾಡುವ ಸಂಗತಿ ಇದಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



