ರಾಜ್ಯ

ನಿವೃತ್ತ DGP ಓಂ ಪ್ರಕಾಶ್ ಹತ್ಯೆ ಪ್ರಕರಣ: ಆರೋಪಿ ಪತ್ನಿಗೆ 14 ದಿನ ನ್ಯಾಯಾಂಗ ಬಂಧನ

ಕೊಲೆ ಆರೋಪಿ ಪಲ್ಲವಿ ಅವರನ್ನು ಪೊಲೀಸರು ಸೋಮವಾರ ನ್ಯಾಯಧೀಶರ ಮುಂದೆ ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

ನಿವೃತ್ತ DGP ಓಂ ಪ್ರಕಾಶ್ ಹತ್ಯೆ ಪ್ರಕರಣ: ಆರೋಪಿ ಪತ್ನಿಗೆ 14 ದಿನ ನ್ಯಾಯಾಂಗ ಬಂಧನ
ನಿವೃತ್ತ ಪೊಲೀಸ್​ಮಹಾನಿರ್ದೇಶಕ ಓಂ ಪ್ರಕಾಶ್ ಹಾಗೂ ಅವರ ಪತ್ನಿ
Published On :

ಬೆಂಗಳೂರು: ರಾಜ್ಯದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಕೊಲೆ ಆರೋಪಿ ಪಲ್ಲವಿ ಅವರನ್ನು ಪೊಲೀಸರು ಸೋಮವಾರ ನ್ಯಾಯಧೀಶರ ಮುಂದೆ ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

ಇದರಂತೆ ಮೇ 3ರ ವರೆಗೆ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆರೋಪಿ ಪಲ್ಲವಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನ ಕಡೆಗೆ ಪೊಲೀಸರು ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಓಂ ಪ್ರಕಾಶ್ ಅವರ ಪುತ್ರಿ ಕೃತಿಯನ್ನು ಪರೀಕ್ಷೆಗಾಗಿ ನಿಮ್ಹಾನ್ಸ್'ಗೆ ಸ್ಥಳಾಂತರ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ವಿಚಾರಣೆಯ ಸಮಯದಲ್ಲಿ, ಪಲ್ಲವಿ ತಮ್ಮ ಪತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದು, ಪತಿ ತನ್ನನ್ನು ಮತ್ತು ತನ್ನ ಮಗಳನ್ನು ಕೊಲ್ಲುತ್ತಾನೆಂದು ತಿಳಿದಿುಬಂದಿತ್ತು. ಹೀಗಾಗಿ ಹತ್ಯೆ ಮಾಡಲು ನಿರ್ಧರಿಸಿದ್ದೆ ಎಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.