ಕಾಶ್ಮೀರದಲ್ಲಿ Article 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಶ್ರೀರಂಗಪಟ್ಟಣ Congress ಶಾಸಕ ರಮೇಶ್ ಬಂಡಿಸಿದ್ದೇಗೌಡ
ಪಹಲ್ಗಾಮ್ ನಲ್ಲಿ ಹಿಂದೂಗಳ ಮೇಲಿನ ನರವೇಧಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಕಾರಣ ಎಂದು ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಡ್ಯ: ಪಹಲ್ಗಾಮ್ ನಲ್ಲಿ ಹಿಂದೂಗಳ ಮೇಲಿನ ನರವೇಧಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಕಾರಣ ಎಂದು ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಅವರು, ಆರ್ಟಿಕಲ್ 370 ತೆಗೆಯೋದಕ್ಕೂ ಮೊದಲು ಯೋಚನೆ ಮಾಡಬೇಕಿತ್ತು. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಅತಿಯಾದ ಆತ್ಮವಿಶ್ವಾಸವೇ ಇಂತಹ ಘಟನೆ ನಡೆಯಲು ಕಾರಣವಾಗಿದೆ. ಈ ಮೂಲಕ ನರಮೇಧಕ್ಕೆ ಪರೋಕ್ಷವಾಗಿ ಬಿಜೆಪಿ ಕಾರಣ ಎಂದಿದ್ದಾರೆ.
ಆರ್ಟಿಕಲ್ 370 ತೆಗೆಯುವ ಮುನ್ನ ಕಾಶ್ಮೀರದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು. ಕೇಂದ್ರ ಸರ್ಕಾರದ ದುಡುಕಿನ ನಿರ್ಧಾರದಿಂದ ಈ ಘಟನೆ ನಡೆದಿದೆ. ಜನರ ಭಾವನೆ ಅರ್ಥ ಮಾಡಿಕೊಂಡು ಆರ್ಟಿಕಲ್ 370 ತೆಗೆಯಬೇಕಿತ್ತು ಎಂದು ಕಿಡಿಕಾರಿದ್ದಾರೆ. ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಕನ್ನಡಿಗರಾಗಿದ್ದಾರೆ.

Pahalgam attack: ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ, ಗಂಭೀರ ಗಾಯಾಳುಗಳಿಗೆ ₹2 ಲಕ್ಷ ಜಮ್ಮು-ಕಾಶ್ಮೀರ ಸರ್ಕಾರ ಪರಿಹಾರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


