Pahalgam terror attack: ಶಿವಮೊಗ್ಗದ ನಿವಾಸದಲ್ಲಿ ಮೃತ ಮಂಜುನಾಥ ರಾವ್ ಅಂತಿಮ ದರ್ಶನ, ಅಂತಿಮ ವಿಧಿವಿಧಾನ
ಇಂದು ಬೆಳಗ್ಗೆ ಮಂಜುನಾಥ್ ಮೃತದೇಹ ಶಿವಮೊಗ್ಗ ತಲುಪಿದ್ದು, ಸರ್ಕಾರದ ಪರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.

ಶಿವಮೊಗ್ಗ: ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ರಾವ್ ಮೃತದೇಹಕ್ಕೆ ಅವರ ನಿವಾಸದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರುತ್ತಿವೆ.
ಇಂದು ಬೆಳಗ್ಗೆ ಮಂಜುನಾಥ್ ಮೃತದೇಹ ಶಿವಮೊಗ್ಗ ತಲುಪಿದ್ದು, ಸರ್ಕಾರದ ಪರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಸಂಸದ ಬಿ ವೈ ರಾಘವೇಂದ್ರ ಸಹ ಮಂಜುನಾಥ್ ರಾವ್ ಅಂತಿಮ ದರ್ಶನ ಪಡೆದಿದ್ದಾರೆ.
ಅರ್ಧ ದಿನ ಸ್ವಯಂ ಪ್ರೇರಿತ ಬಂದ್
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ದಾರುಣವಾಗಿ ಮೃತಪಟ್ಟಿರುವ ಮಂಜುನಾಥ ರಾವ್ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಇಂದು ಶಿವಮೊಗ್ಗದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಅರ್ಧ ದಿನ ಸ್ವಯಂಪ್ರೇರಿತ ಬಂದ್ ನಡೆಸಲಾಗುತ್ತಿದೆ.
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಮೃತಪಟ್ಟಿದ್ದು ಅವರು ಪತ್ನಿ ಮತ್ತು ಮಗನ ಜೊತೆ ಪ್ರವಾಸಕ್ಕೆ ಹೋಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



