ರಾಜ್ಯ

ನಿಮ್ಮನ್ನು ಪೀಸ್​ ಪೀಸ್ ಮಾಡಿ ಫ್ರಿಡ್ಜ್ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬ್ತಿನಿ: CM, DCM ಗೆ ಬೆದರಿಕೆ ಸಂದೇಶ

ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬುವುದಾಗಿ ಇ-ಮೇಲ್‌ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಸಂದೇಶ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಿಮ್ಮನ್ನು ಪೀಸ್​ ಪೀಸ್ ಮಾಡಿ ಫ್ರಿಡ್ಜ್ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬ್ತಿನಿ: CM, DCM ಗೆ ಬೆದರಿಕೆ ಸಂದೇಶ
ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ
Published On :

ಬೆಂಗಳೂರು: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಇಡೀ ದೇಶವೇ ಬೆಚ್ಚಿಬಿದ್ದಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ​ಅವರಿಗೆ ಬೆದರಿಕೆ ಮೇಲ್ ಒಂದು ಬಂದಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಕೊಲೆ ಮಾಡುವುದಾಗಿ ಕಿಡಿಗೇಡಿಯೊಬ್ಬ ಇ-ಮೇಲ್‌ ಮೂಲಕ ಸಂದೇಶ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬುವುದಾಗಿ ಇ-ಮೇಲ್‌ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಸಂದೇಶ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಂಧಾರ್‌ ರಜಪೂತ್‌ ಹೆಸರಿನ ಇ-ಮೇಲ್‌ನಿಂದ ಈ ಬೆದರಿಕೆ ಸಂದೇಶ ಬಂದಿದೆ ಎಂಬುದು ಗೊತ್ತಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಬೆದರಿಕೆ ಇ-ಮೇಲ್‌ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌, ಗೃಹ ಸಚಿವರು, ನಗರ ಪೊಲೀಸ್‌ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಮಪುರ ಪ್ರಭಾಕರ್​ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆತ ಇದುವರೆಗೂ ಸಾಲ ವಾಪಸ್ ಕೊಟ್ಟಿಲ್ಲ. ಪ್ರಭಾಕರ್​ಗೆ ಬೇಗ ಸಾಲ ವಾಪಸ್ ಕೊಡೋಕೆ‌ ಹೇಳಿ. ಆ ಪ್ರಭಾಕರ್ ಹಣವನ್ನು ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಇಟ್ಟಿದ್ದಾನೆ ಎಂದು ಬರೆಯಲಾಗಿದೆ. ಪ್ರಭಾಕರ್ ಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಒಬ್ಬ ಮಗನಿಗೆ ಮದುವೆ ಮಾಡಿದ್ದಾನೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ ಪ್ರಭಾಕರ್ ನ ಕೊಲೆ ಮಾಡ್ತೀನಿ. ನೀವು ಹಣ ಕೊಡಿಸಿಲ್ಲ ಅಂದ್ರೆ ನಿಮ್ಮನ್ನು ಕೊಲೆ ಮಾಡ್ತೀನಿ ಅಂತ ಇ‌ಮೇಲ್ ಮಾಡಿದ್ದಾನೆ.

ಸದ್ಯ ಇ ಮೇಲ್ ಆಧರಿಸಿ ದೂರು ದಾಖಲಿಸಿರೋ ಪೊಲೀಸರು, ಎಫ್ ಐ ಆರ್ ದಾಖಲಿಸಿ ಸಿಂದಾರ್ ರಜಪೂತ್ ಗಾಗಿ ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.