ನಮಗೆ ದೇಶದ ಐಕ್ಯತೆ ಮುಖ್ಯ, ನೆಲದ ಕಾನೂನಿನ ಪ್ರಕಾರ ಕ್ರಮ: ಡಿ.ಕೆ ಶಿವಕುಮಾರ್
ಯಾರೂ ಸಹ ಇದನ್ನು ರಾಜಕೀಯ ಮಾಡಬಾರದು. ಭಾರತೀಯರನ್ನು ಕಾಪಾಡಬೇಕು ಎನ್ನುವುದು ಮುಖ್ಯವಾಗಬೇಕು ಎಂದು ಹೇಳಿದ

ಮಲೆಮಹದೇಶ್ವರ ಬೆಟ್ಟ: ದೇಶದ ಭದ್ರತೆ ವಿಚಾರವನ್ನು ನಾವು ರಾಜಕೀಯಕ್ಕೆ ಬಳಸಿಕೊಳ್ಳಲು ಇಷ್ಟಪಡುವುದಿಲ್ಲ. ಕೆಲವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಎಲ್ಲವೂ ನಡೆಯುತ್ತದೆ. ನಮಗೆ ದೇಶದ ಐಕ್ಯತೆ ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ರಾಹುಲ್ ಗಾಂಧಿ ಅವರು ದೇಶದ ಹೊರಗಡೆ ಇದ್ದಾಗಲೇ ಭಯೋತ್ಪಾದಕ ದಾಳಿಯಾಗುತ್ತವೆ ಎನ್ನುವ ಬಿಜೆಪಿ ಐಟಿ ಸೆಲ್ ಮಾಡಿದ ಆರೋಪದ ವಿರುದ್ದ ಎಫ್ ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ, "ಇಂತಹ ಸಂದಿಗ್ಧ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ನಾವು ಬೆಂಬಲ ನೀಡಬೇಕು. ದೇಶದಲ್ಲಿ ಶಾಂತಿ ಮುಖ್ಯ" ಎಂದರು.
ದೇಶದ ಮುಸ್ಲಿಂ ಸಮುದಾಯ ಹಿಂದುಗಳ ವಿರುದ್ಧ ಇದ್ದಾರೆ ಎನ್ನುವ ವ್ಯಾಖ್ಯಾನ ಹುಟ್ಟುತ್ತಿರುವ ಬಗ್ಗೆ ಕೇಳಿದಾಗ, "ನಾವು ಶಾಂತಿಯನ್ನು ಕಾಪಾಡಬೇಕು. ಯಾರೂ ಸಹ ಇದನ್ನು ರಾಜಕೀಯ ಮಾಡಬಾರದು. ಭಾರತೀಯರನ್ನು ಕಾಪಾಡಬೇಕು ಎನ್ನುವುದು ಮುಖ್ಯವಾಗಬೇಕು" ಎಂದು ಹೇಳಿದರು.
ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ತಮ್ಮ ಇಲಾಖೆ ವತಿಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



