ರಾಜ್ಯ

ಚಿನ್ನ ವಂಚನೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ರಾತ್ರಿಯಿಡೀ ED ತಲಾಶ್

ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು.

ಚಿನ್ನ ವಂಚನೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ರಾತ್ರಿಯಿಡೀ ED ತಲಾಶ್
ವಿನಯ್ ಕುಲಕರ್ಣಿ
Published On :

ಬೆಂಗಳೂರು: ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ತನಿಖೆ ವೇಳೆ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿರುವುದು ಪತ್ತೆಯಾಗಿತ್ತು.

ಚಿನ್ನ ವಂಚನೆ ಪ್ರಕರಣದಲ್ಲಿ ಕೋಟ್ಯಾಂತರ ರೂಪಾಯಿ ಬೇನಾಮಿ ವ್ಯವಹಾರ ನಡೆಸಿದ್ದಾರೆ ಎಂದು ಪೊಲೀಸರು ಇಡಿಗೆ ಮಾಹಿತಿ ನೀಡಿದ್ದರು. ಪೊಲೀಸರ ಮಾಹಿತಿ ಆಧರಿಸಿ ಇಸಿಐಆರ್ ದಾಖಲಿಸಿಕೊಂಡಿದ್ದ ಇಡಿ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹಲವರ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.