ರಾಜ್ಯ

ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ: ವಿಧೇಯಕ್ಕೆ ರಾಜ್ಯಪಾಲರ ಅನುಮೋದನೆ

ಕಳೆದ ಮಾರ್ಚ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ಉಭಯ ಸದನಗಳಲ್ಲಿ ವಿಧೇಯಕವನ್ನು ಅಂಗೀಕರಿಸಿ ರಾಜ್ಯಪಾಲರ ಸಹಮತಿಗೆ ಕಳುಹಿಸಲಾಗಿತ್ತು.

ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ: ವಿಧೇಯಕ್ಕೆ ರಾಜ್ಯಪಾಲರ ಅನುಮೋದನೆ
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
Published On :

ಬೆಂಗಳೂರು: ಮಂಡ್ಯ ತಾಲೂಕಿನ ವಿ.ಸಿ ಫಾರ್ಮ್ ನಲ್ಲಿ ನೂತನ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ.

ಕಳೆದ ಮಾರ್ಚ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ಉಭಯ ಸದನಗಳಲ್ಲಿ ವಿಧೇಯಕವನ್ನು ಅಂಗೀಕರಿಸಿ ರಾಜ್ಯಪಾಲರ ಸಹಮತಿಗೆ ಕಳುಹಿಸಲಾಗಿತ್ತು.

ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕದ ಬಗ್ಗೆ ಚರ್ಚಿಸಿ ರಾಜ್ಯಪಾಲರಿಗೆ ಸಹಮತಿ ನೀಡುವಂತೆ ಸಚಿವ ಚಲುವರಾಯಸ್ವಾಮಿ ಮನವಿ ಸಲ್ಲಿಸಿದರು. ಮನವಿ ಪುರಸ್ಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿಧೇಯಕಕ್ಕೆ ಸಹಮತಿ ನೀಡಿ ಅನುಮೋದಿಸಿದ್ದಾರೆ. ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ ಮೊದಲ ಕುಲಪತಿಗಳನ್ನು ರಾಜ್ಯಪಾಲರು ನೇಮಕ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.