ಭಟ್ಕಳದಲ್ಲಿ 15 ಮಂದಿ ಪಾಕಿಸ್ತಾನಿ ಪ್ರಜೆಗಳು; ಸದ್ಯಕ್ಕಿಲ್ಲ ಗಡಿಪಾರು!
ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು 48 ಗಂಟೆ ಕೇಂದ್ರ ಸರ್ಕಾರ ಗಡುವು ನೀಡಿದೆ.

ಭಟ್ಕಳ: ಭಟ್ಕಳದಲ್ಲಿ 15 ಮಂದಿ ಪಾಕಿಸ್ತಾನಿ ಪ್ರಜೆಗಳಿದ್ದು, ಅವರೆಲ್ಲರೂ ದೀರ್ಘಾವಧಿ ವೀಸಾ ಹೊಂದಿರುವುದರಿಂದ ಭಾರತದಲ್ಲೇ ನೆಲೆಸಲಿದ್ದಾರೆಂದು ತಿಳಿದುಬಂದಿದೆ.
ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು 48 ಗಂಟೆ ಕೇಂದ್ರ ಸರ್ಕಾರ ಗಡುವು ನೀಡಿದೆ. ಆದರೆ, ಇಲ್ಲಿರುವ ಬಹುತೇಕರು ಮಹಿಳೆಯರಾಗಿದ್ದು, ಅವರನ್ನು ಸ್ಥಳೀಯರನ್ನು ವಿವಾಹವಾಗಿದ್ದಾರೆ. ಅಲ್ಲದೆ, ದೀರ್ಘಕಾಲೀನ ವೀಸಾ ಹೊಂದಿದ್ದಾರೆ. ಹೀಗಾಗಿ ಅವರನ್ನು ಗಡಿಪಾರು ಅವರನ್ನು ವಾಪಸ್ ಕಳುಹಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ 15 ಪಾಕಿಸ್ತಾನಿ ಪ್ರಜೆಗಳಿದ್ದು, ಅವರಲ್ಲಿ 14 ಮಂದಿ ಭಟ್ಕಳದಲ್ಲಿ ಮತ್ತು ಒಬ್ಬರು ಕಾರವಾರದಲ್ಲಿದ್ದಾರೆ. ಈ 15 ಜನರಲ್ಲಿ 14 ಮಂದಿ ಮಹಿಳೆಯರಿದ್ದು, ಒಂದು ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇದೆ. ಪಾಕಿಸ್ತಾನದ ಈ ಮಹಿಳೆಯರು ಭಟ್ಕಳದಲ್ಲಿರುವ ತಮ್ಮ ಮುಸ್ಲಿಂ ಸಂಬಂಧಿಕರನ್ನು ಮದುವೆಯಾಗಿದ್ದಾರೆ. ಅವರ ವೀಸಾಗಳನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ನವೀಕರಿಸಲಾಗುತ್ತದೆ. ಅವರು ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ, ಆದರೆ ಇಲ್ಲಿಯವರೆಗೆ ಅವರ ಅರ್ಜಿಗಳನ್ನು ಪರಿಗಣಿಸಲಾಗಿಲ್ಲ.
ಭಟ್ಕಳದ ನವಾಯತ್ ಸಮುದಾಯದಲ್ಲಿ ಪಾಕಿಸ್ತಾನಿಯರೊಂದಿಗಿನ ವೈವಾಹಿಕ ಸಂಬಂಧಗಳು ಸಾಮಾನ್ಯವಾಗಿದ್ದು, ಮದುವೆಯ ನಂತರ ಭಾರತಕ್ಕೆ ಪ್ರವೇಶಿಸುವವರಿಗೆ ಸರ್ಕಾರ ದೀರ್ಘಾವಧಿಯ ವೀಸಾಗಳನ್ನು ನೀಡುತ್ತದೆ.
ಹಲವು ರೀತಿಯ ವೀಸಾಗಳಿವೆ. ದೀರ್ಘಾವಧಿಯ ವೀಸಾ ಹೊಂದಿರುವವರನ್ನು ಗಡೀಪಾರು ಮಾಡದಂತೆ ಸರ್ಕಾರ ನಮಗೆ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ, ಇಲ್ಲಿರುವ ಬಹುತೇಕ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳುಹಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 88 ಪಾಕಿಸ್ತಾನಿ ಪ್ರಜೆಗಳಿದ್ದು, ಅವರಲ್ಲಿ 84 ಮಂದಿ ದೀರ್ಘಾವಧಿಯ ವೀಸಾದಲ್ಲಿದ್ದಾರೆ ಮತ್ತು ನಾಲ್ವರು ವಿಸಿಟರ್ಸ್ ವೀಸಾದಲ್ಲಿದ್ದಾರೆ. ಹೊನ್ನಾವರದ ವಾಲ್ಕಿ ಗ್ರಾಮದ ಹುಡುಗಿ ಪಾಕಿಸ್ತಾನಿ ಪ್ರಜೆಯನ್ನು ವಿವಾಹವಾಗಿದ್ದಾರೆ. ಮದುವೆ ಪಾಕಿಸ್ತಾನದಲ್ಲಿ ನಡೆದಿದ್ದು, ಅವರು ಪಾಕಿಸ್ತಾನಿ ವೀಸಾಕ್ಕಾಗಿ ಕಾಯುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



