ಬೆಂಗಳೂರು: ತೋಟದ ಮನೆಯಲ್ಲಿ ಯುವ ವಕೀಲೆ ಜೊತೆಗೆ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ
ಮೃತರನ್ನು ವಕೀಲೆ ರಮ್ಯಾ(27) ಹಾಗೂ ಪುನೀತ್ ಎಂದು ಗುರ್ತಿಸಲಾಗಿದೆ. ಇಬ್ಬರೂ ಸೀಲಿಂಗ್ ಫ್ಯಾನ್'ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬೆಂಗಳೂರು: ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸಪುರದಲ್ಲಿರುವ ತೋಟದ ಮನೆಯಲ್ಲಿ ವಕೀಲೆ ಹಾಗೂ ಯುವಕನ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಮೂಡತೊಡಗಿವೆ.
ಮೃತರನ್ನು ವಕೀಲೆ ರಮ್ಯಾ(27) ಹಾಗೂ ಪುನೀತ್ ಎಂದು ಗುರ್ತಿಸಲಾಗಿದೆ. ಇಬ್ಬರೂ ಸೀಲಿಂಗ್ ಫ್ಯಾನ್'ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಗುರುವಾರ ಸಂಜೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ ಸಾವು ಹಲವು ಅನುಮಾನಗಳಿಗೆ ಎಡೆಮಾಟಿಕೊಟ್ಟಿದೆ.
ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಲವು ಆಯಾಮಾಗಳಲ್ಲಿ ತನಿಖೆ ಕೈಗೊಂಡಿದ್ದಾರೆ.
ಇನ್ನು ವಕೀಲೆ ರಮ್ಯ ಮನೆಯಲ್ಲಿ ವಾಸವಿದ್ದ ಪುನೀತ್ ಎಂಬಾತನ ಮೃತದೇಹ ಕೆಂಪಲಿಂಗನಹಳ್ಳಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿಗೆ ಕಾರಣ ನಿಗೂಢವಾಗಿದೆ. ಮರಣೋತ್ತರ ಪರೀಕ್ಣೆಗೆ ಮೃತ ದೇಹ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ರಮ್ಯಾ ಸಾವಿನ ಸುತ್ತಲೂ ಅನುಮಾನಗಳು ಹುಟ್ಟಿಕೊಂಡಿದ್ದು, ಕುಟುಂಬಸ್ಥರು ಉದ್ಯಮಿ ದಿನೇಶ್ ಎಂಬಾತನ ಮೇಲೆ ಅನುಮಾನ ವ್ತಕ್ತಪಡಿಸಿದ್ದಾರೆ.
ಸದ್ಯ ಪೊಲೀಸರು ಕುಟುಂಬಸ್ಥರ ದೂರಿನ ಮೇರೆಗೆ ಕೊಲೆ ಆರೋಪದ (103) ಅಡಿ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
"ರಮ್ಯಾ ಅವರ ಸಾವು ಉದ್ಯಮಿಯೊಂದಿಗಿನ ವೈಯಕ್ತಿಕ ಸಮಸ್ಯೆಗಳಿಂದಾಗಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿವೆ. ಆದರೆ ಪುನೀತ್ ರಮ್ಯಾ ಅವರ ಸಾವಿನ ನೋವು ಸಹಿಸಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದು. ರಮ್ಯಾ ಹಾಗೂ ಉದ್ಯಮಿ ನಡುವಿನ ಸಮಸ್ಯೆ ಬಗ್ಗೆ ಪುನೀತ್ ಗೆ ತಿಳಿದಿದ್ದ ಕಾರಣಕ್ಕೆ ಕೊಲೆ ಮಾಡಿರಬಹುದು ಎಂಬ ಅನುಮಾನಗಳೂ ವ್ಯಕ್ತವಾಗಿವೆ. ಈ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



