ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ: ಸಿಎಂ ಸಿದ್ದರಾಮಯ್ಯ; Video
ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ, ಜನರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದಿದ್ದಾರೆ.
ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದು ನಾಚಿಕೆಗೇಡು. ಇದು ಮಹತ್ವದ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ನರೇಂದ್ರ ಮೋದಿ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


