ಉಗ್ರರ ದಾಳಿ ಬಳಿಕ ಕೇಂದ್ರದ ಕ್ರಮ ಶ್ಲಾಘನೀಯ, POK ವಶಪಡಿಸಿಕೊಂಡು ಪಾಕ್'ಗೆ ತಕ್ಕ ಪಾಠ ಕಲಿಸಿ: ಲಕ್ಷ್ಮಣ್ ಸವದಿ
ನಾವು ಭಾರತೀಯ ಪ್ರಜೆಗಳಾಗಿ ಒಟ್ಟಾಗಿದ್ದೇವೆ. ಉಗ್ರಗಾಮಿಗಳನ್ನು ನಿಗ್ರಹ ಮಾಡಲು ಕೇಂದ್ರ ಸರಕಾರ ಮೊದಲು ಪಿಒಕೆಯನ್ನು ವಶಪಡಿಸಿಕೊಳ್ಳಬೇಕು.

ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿ ಘಟನೆ ಬಳಿಕ ಕೇಂದ್ರ ಸರ್ಕಾರ ಕೈಗೊಂಡ ಕ್ರಮವನ್ನು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಶ್ಲಾಘಿಸಿದ್ದು, ಆದಷ್ಟು ಬೇಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ಪಡೆದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿ ಎಂದು ಒತ್ತಾಯಿಸಿದ್ದಾರೆ.
ಅಥಣಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 26 ಅಮಾಯಕ ಪ್ರವಾಸಿಗರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಅವರ ದುಃಖಿತ ಕುಟುಂಬಗಳಿಗೆ ಶಕ್ತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯನ್ನು ಯಾರೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ನಾವು ಭಾರತೀಯ ಪ್ರಜೆಗಳಾಗಿ ಒಟ್ಟಾಗಿದ್ದೇವೆ. ಉಗ್ರಗಾಮಿಗಳನ್ನು ನಿಗ್ರಹ ಮಾಡಲು ಕೇಂದ್ರ ಸರಕಾರ ಮೊದಲು ಪಿಒಕೆಯನ್ನು ವಶಪಡಿಸಿಕೊಳ್ಳಬೇಕು ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಬಹಳ ದೊಡ್ಡದಾಗಿ ಬೆಳೆಯುತ್ತಿದೆ. ಅಲ್ಲಿರುವ ಸಾರ್ವಜನಿಕರು ನೆಮ್ಮದಿಯಿಂದ ಜೀವನ ಕಟ್ಟಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಎಂದರೆ ಅದು ಭೂಲೋಕದ ಸ್ವರ್ಗ ಎಂದು ಪ್ರಖ್ಯಾತಿಯನ್ನು ಪಡೆದಿದೆ. ನಾನು ಕೂಡ ಕಳೆದ ಆರು ತಿಂಗಳ ಹಿಂದೆ ಭೇಟಿ ನೀಡಿದ್ದೆ. ಈ ಘಟನೆಯಿಂದಾಗಿ ಅಲ್ಲಿನ ಪ್ರವಾಸೋದ್ಯಮ ಕುಗ್ಗಿದೆ. ಈ ಉಗ್ರಗಾಮಿಗಳ ನಿರ್ಮೂಲನೆಗೆ ನಾವು ಎಲ್ಲರೂ ಒಗ್ಗಟ್ಟಾಗಿ ಬೆಂಬಲವನ್ನು ನೀಡುತ್ತೇವೆ. ಈಗಾಗಲೇ ಕೇಂದ್ರ ಸರಕಾರ ಪಾಕಿಸ್ತಾನ ವಿರುದ್ಧ ರಾಜತಾಂತ್ರಿಕ ನಿರ್ಣಯಗಳನ್ನು ಕೈಗೊಂಡಿದೆ. ಉಗ್ರರ ದಾಳಿ ಬಳಿಕ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮ ಶ್ಲಾಘನೀಯವಾಗಿದ್ದು, ಇದಕ್ಕೆ ನನ್ನ ಬೆಂಬಲವಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



