ಡಾ. ಕೆ ಕಸ್ತೂರಿರಂಗನ್ ನಿಧನ: ಇಂದು ಸಾರ್ವಜನಿಕ ದರ್ಶನ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಅವರ ಪಾರ್ಥೀವ ಶರೀರವನ್ನು ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಜನರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮಾಜಿ ಅಧ್ಯಕ್ಷ ಡಾ. ಕೆ. ಕಸ್ತೂರಿರಂಗನ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ.
ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ ಕಸ್ತೂರಿ ರಂಗನ್ ಅವರು ನಿನ್ನೆ ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು. ಅವರ ಪಾರ್ಥೀವ ಶರೀರವನ್ನು ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಜನರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು ಎಂದು ಇಸ್ರೋ ತಿಳಿಸಿದೆ.
ಡಾ. ಕಸ್ತೂರಿರಂಗನ್ ಅವರ ಹಿರಿಯ ಮಗ ಸಂಜಯ್ ರಂಜನ್ ಅಮೆರಿಕದಿಂದ ಹಿಂದಿರುಗಿದ ನಂತರ ಇಂದು ಅಪರಾಹ್ನ ಬಳಿಕ ಅಂತ್ಯಕ್ರಿಯೆಯನ್ನು ನಡೆಸಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.
1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ ಕಸ್ತೂರಿರಂಗನ್ ಅವರು ಮೂರು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಷ್ಟೇ ಅಲ್ಲದೆ, ಪರಿಸರ, ಶಿಕ್ಷಣ ಮತ್ತು ಯೋಜನಾ ಆಯೋಗದಲ್ಲಿಯೂ ಸೇವೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



