ರೈಲ್ವೆ ಪರೀಕ್ಷೆಯಲ್ಲೂ ಜನಿವಾರ-ಮಂಗಳಸೂತ್ರ ತೆಗೆಯುವಂತೆ ಸೂಚನೆ: ಸಚಿವ ಸೋಮಣ್ಣ ಮಧ್ಯಪ್ರವೇಶ, ತಣ್ಣಗಾಯ್ತು ವಿವಾದ
ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ಅಧಿಕಾರಿಗಳಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.
ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ವಿವಾದ ಭುಗಿಲೇಳುತ್ತಿದ್ದಂತೆಯೇ ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಸಚಿವ ಸೋಮಣ್ಣ ಅವರ ಗಮನಕ್ಕೆ ತಂದಿದ್ದರು. ಇದರ ಬೆನ್ನಲ್ಲೇ ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವಿವಾದಕ್ಕೆ ಅಂತ್ಯ ಹಾಡಿದ್ದಾರೆ.
ಸೋಮಣ್ಣ ಅವರ ಸೂಚನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬ್ರಿಜೇಶ್ ಚೌಟ ಅವರು, ‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಹೇಳಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏಪ್ರಿಲ್ 28, 29 ಹಾಗೂ 30 ರಂದು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



