BBMP ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ಮೇ 31ರವರೆಗೆ ವಿಸ್ತರಣೆ
ಆಸ್ತಿ ಮಾಲೀಕರು ಏಪ್ರಿಲ್ 30ರೊಳಗೆ ಪೂರ್ಣ ತೆರಿಗೆ ಪಾವತಿಸಿ ಶೇಕಡಾ 5 ರಷ್ಟು ರಿಯಾಯಿತಿ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ಬೆಂಗಳೂರು: 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸಲು ಶೇ.5ರಷ್ಟು ರಿಯಾಯಿತಿ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.
ಆಸ್ತಿ ಮಾಲೀಕರು ಏಪ್ರಿಲ್ 30ರೊಳಗೆ ಪೂರ್ಣ ತೆರಿಗೆ ಪಾವತಿಸಿ ಶೇಕಡಾ 5 ರಷ್ಟು ರಿಯಾಯಿತಿ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಶೇಕಡಾ 5 ರಷ್ಟು ರಿಯಾಯಿತಿ ಸೌಲಭ್ಯ ಪಡೆಯಲು ಒಂದು ದಿನವಷ್ಟೇ ಬಾಕಿ ಇದೆ. ಹೀಗಾಗಿ, ರಿಯಾಯಿತಿ ಅವಧಿಯನ್ನು ಮೇ 31 ವರೆಗೆ ವಿಸ್ತರಿಸಲಾಗಿದೆ.ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆದೇಶ ಹೊರಡಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏ.30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5% ರಷ್ಟು ರಿಯಾಯಿತಿ ನೀಡಲಾಗಿರುತ್ತದೆ. ಆದರೆ, ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಶೇ.5ರಷ್ಟು ರಿಯಾಯಿತಿಯನ್ನು ಒಳಗೊಂಡ ಆಸ್ತಿ ತೆರಿಗೆ ಪಾವತಿ ಅವಧಿಯನ್ನು ಇದೀಗ ಮೇ 31ರವರೆಗೆ ವಿಸ್ತಣೆ ಮಾಡಲಾಗಿದೆ. ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಹೆಚ್ಚಿನ ಸಾರ್ವಜನಿಕರು ಆಸ್ತಿ ತೆರಿಗೆ ಪಾವತಿ ಮಾಡುವಂತೆ ಮನವಿ ಮಾಡಿದ್ದಾರೆ.
ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿರುತ್ತದೆ. ಆದುದರಿಂದ 2025-26 ನೇ ಸಾಲಿನ ಆಸ್ತಿತೆರಿಗೆ ಶೇ.5ರಷ್ಟು ರಿಯಾಯಿತಿ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಬಿಬಿಎಂಪಿ ಆಡಳಿತಗಾರರ ನಡವಳಿಗಳಿಗೆ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿತ್ತು. ಸದರಿ ಪ್ರಸ್ತಾವನೆಗೆ ಸರ್ಕಾರದಿಂದ ಆದೇಶ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.
ಸರ್ಕಾರದ ನಗರಭಿವೃದ್ಧಿ ಇಲಾಖೆಯ ಆದೇಶದ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಿ, 2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



