ರಾಜ್ಯ

ತುಷಾರ್ ಗಿರಿನಾಥ್ ವರ್ಗಾವಣೆ: BMRCL ಮುಖ್ಯಸ್ಥ ಮಹೇಶ್ವರ್ ರಾವ್ BBMP ನೂತನ ಸಾರಥಿ

ಈ ಕುರಿತು ಸೋಮವಾರ ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್.ಆರ್ ಎಪ್ರಿಲ್ 30ರಂದು ನಿವೃತ್ತಿಯಾಗಲಿದ್ದಾರೆ.

ತುಷಾರ್ ಗಿರಿನಾಥ್ ವರ್ಗಾವಣೆ: BMRCL ಮುಖ್ಯಸ್ಥ ಮಹೇಶ್ವರ್ ರಾವ್ BBMP ನೂತನ ಸಾರಥಿ
ಮಹೇಶ್ವರ್ ರಾವ್
Published On :

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರನ್ನು ಬದಲಾವಣೆ ಮಾಡಲಾಗಿದ್ದು. ಹೊಸ ಬಿಬಿಎಂಪಿ ಮುಖ್ಯ ಆಯುಕ್ತರನ್ನಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಸೋಮವಾರ ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್. ಆರ್. ಎಪ್ರಿಲ್ 30ರಂದು ನಿವೃತ್ತಿಯಾಗಲಿದ್ದಾರೆ.

ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ಏಪ್ರಿಲ್ 30ರಿಂದ ಜಾರಿಗೆ ಬರುವಂತೆ ನಗರಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಮಹೇಶ್ವರ್‌ ರಾವ್‌ ಅವರು BMRCL ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಅವರಿಗೆ ಹೆಚ್ಚುವರಿ ಜವಾಬ್ದಾರಿ ಕೊಡಲಾಗಿದೆ. 1995ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.

Story image

ಬಿಬಿಎಂಪಿಗೆ ಕಳೆದ 5 ವರ್ಷಗಳಿಂದ ಚುನಾವಣೆ ನಡೆದಿಲ್ಲ. ಕಳೆದ 5 ವರ್ಷಗಳಿಂದಲೂ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಆಡಳಿತಾಧಿಕಾರಿಯ ಮೂಲಕ ಆಡಳಿತ ನಡೆಯುತ್ತಿದೆ. ಬೆಂಗಳೂರಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಮುಖ್ಯ ಆಯುಕ್ತರು ಹಾಗೂ ಆಡಳಿತಾಧಿಕಾರಿಗಳೇ ತೆಗೆದುಕೊಳ್ಳುತ್ತಿದ್ದಾರೆ. ಇನ್ನು ಬಿಬಿಎಂಪಿಯ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅವರು ಕಳೆದ ಎರಡೂವರೆ ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.