ಕಾಂಗ್ರೆಸ್ ರ‍್ಯಾಲಿ ವೇಳೆ ಭದ್ರತಾ ವೈಫಲ್ಯ: ವರದಿ ಕೋರಿದ ಸಚಿವ ಪರಮೇಶ್ವರ್
ಘಟನೆಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಬಿಜೆಪಿ ಮಹಿಳಾ ಸದಸ್ಯರು ಕಾಂಗ್ರೆಸ್ ಶಾಲು ಧರಿಸಿ ಸ್ಥಳಕ್ಕೆ ಬಂದಿದ್ದು, ಸಿಎಂ ಮಾತನಾಡುವಾಗ ಅವರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ.

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಭದ್ರತಾ ಲೋಪವಾಗಿದೆಯೇ ಎಂದು ಪರಿಶೀಲಿಸಿ ವರದಿ ಸಲ್ಲಿಸುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ (ಕಾನೂನು ಮತ್ತು ಸುವ್ಯವಸ್ಥೆ) ಸೂಚನೆ ನೀಡಲಾಗಿದೆ ಎಂದು ಸಚಿವ ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಬಿಜೆಪಿ ಮಹಿಳಾ ಸದಸ್ಯರು ಕಾಂಗ್ರೆಸ್ ಶಾಲು ಧರಿಸಿ ಸ್ಥಳಕ್ಕೆ ಬಂದಿದ್ದು, ಸಿಎಂ ಮಾತನಾಡುವಾಗ ಅವರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ. ಹೀಗಾಗಿ ಇಲಾಖೆಯಿಂದ ಯಾವುದೇ ಲೋಪವಾಗಿದೆಯೇ ಎಂದು ಪರಿಶೀಲಿಸಿ ವರದಿ ನೀಡುವಂತೆ ಎಡಿಜಿಪಿ (ಎಲ್ & ಒ) ಅವರಿಗೆ ನಿರ್ದೇಶನ ನೀಡಿದ್ದೇನೆಂದು ಹೇಳಿದರು.
ಪಾಕಿಸ್ತಾನದೊಂದಿಗೆ ಯುದ್ಧದ ಅಗತ್ಯವಿಲ್ಲ ಎಂಬ ಸಿಎಂ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ವಿರೋಧ ಪಕ್ಷದ ಬಿಜೆಪಿ ಆಗ್ರಹ ಕುರಿತು ಮಾತನಾಡಿ, ಯುದ್ಧಕ್ಕೆ ಹಿಂಜರಿಯಬಾರದು ಎಂದು ಸಿಎಂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ನವದೆಹಲಿಯಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕರು ಈಗಾಗಲೇ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಎಲ್ಲಾ ನಾಯಕರು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡುವುದು ಸರಿಯಲ್ಲ. ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿದ್ದು, ಅವರು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



