ರಾಜ್ಯ

ಬಾಲಕ ನಿಶ್ಚಿತ್‌ ಕೊಲೆ ಪ್ರಕರಣ: ಅಪಹರಣಕಾರರ ಕಾಲಿಗೆ ಗುಂಡೇಟು- ಇಬ್ಬರ ಬಂಧನ; ಸ್ಪೇರ್ ಡ್ರೈವರ್ ಮಾಸ್ಟರ್ ಮೈಂಡ್; Video

ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನಿಸಿದ್ದರು. ಆಗ ಹುಳಿಮಾವು ಠಾಣೆಯ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾದರು

ಬಾಲಕ ನಿಶ್ಚಿತ್‌ ಕೊಲೆ ಪ್ರಕರಣ: ಅಪಹರಣಕಾರರ ಕಾಲಿಗೆ ಗುಂಡೇಟು- ಇಬ್ಬರ ಬಂಧನ; ಸ್ಪೇರ್ ಡ್ರೈವರ್ ಮಾಸ್ಟರ್ ಮೈಂಡ್; Video
ಗೋಪಾಲ ಕೃಷ್ಣ ಮತ್ತು ಗುರುಮೂರ್ತಿ
Published On :

ಬೆಂಗಳೂರು: ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕ ನಿಶ್ಚಿತ್‌ನನ್ನು (13) ಅಪಹರಿಸಿ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ಕಗ್ಗಲಿಪುರ ಅರಣ್ಯದಲ್ಲಿ ಅಡಗಿ ಕುಳಿತ್ತಿದ್ದರು.‌ ಖಚಿತ ಮಾಹಿತಿ ಆಧರಿಸಿ ಗುರುವಾರ ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನಿಸಿದ್ದರು. ಆಗ ಹುಳಿಮಾವು ಠಾಣೆಯ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾದರು. ಇಬ್ಬರ ಅಪಹರಣಕಾರರ ಕಾಲಿಗೆ ಗುಂಡೇಟು ಬಿದ್ದಿದೆ.

ಗುರುಮೂರ್ತಿ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಬಾಲಕನ ಕುಟುಂಬವು ಈ ಹಿಂದೆ ಗುರುಮೂರ್ತಿಯನ್ನು ಸ್ಪೇರ್ ಡ್ರೈವರ್ ಆಗಿ ನೇಮಿಸಿಕೊಂಡಿತ್ತು. ಬುಧವಾರ ರಾತ್ರಿ 8 ಗಂಟೆಯಾದರೂ ತನ್ನ ಮಗ ಮನೆಗೆ ಹಿಂತಿರುಗದ ಕಾರಣ ಕಾಲೇಜು ಪ್ರಾಧ್ಯಾಪಕರಾಗಿರುವ ನಿಶ್ಚಿತ್ ಅವರ ತಂದೆ ಹುಳಿಮಾವು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ನಿಶ್ಚಿತ್ ಸೈಕಲ್ ಅರಕೆರೆಯ ಪ್ರೋಮಿಲಿ ಪಾರ್ಕ್ ಪ್ರದೇಶದಲ್ಲಿ ಬಿಟ್ಟು ಹೋಗಲಾಗಿತ್ತು.

ಬಾಲಕನನ್ನು ಅಪಹರಿಸಿ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹುಳಿಮಾವು ಠಾಣೆಗೆ ಪೋಷಕರು ಘಟನೆ‌ ಕುರಿತು ಮಾಹಿತಿ‌ ನೀಡಿದ್ದರು. ಒಂದೆಡೆ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದರು. ಮತ್ತೊಂದೆಡೆ ಪೋಷಕರು, ಆರೋಪಿಗಳಿಗೆ ₹5 ಲಕ್ಷ ನೀಡಿ ಮಗನನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದರು.‌ ಆದರೆ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದ ಆರೋಪಿಗಳು ಬಾಲಕನ್ನು ಕಗ್ಗಲಿಪುರದ ನಿರ್ಜ‌ನ ಪ್ರದೇಶಕ್ಕೆ ಕರೆದೊಯ್ದು ಕತ್ತು ಕೊಯ್ದು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ. ಅಪಹರಣಕಾರರನ್ನು ಚಿಕಿತ್ಸೆಗಾಗಿ ಜಯನಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.