ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಣ್ಣೀರಿಟ್ಟ ಮಾಜಿ ಪ್ರಧಾನಿ HD Devegowda
ಪ್ರಜ್ವಲ್ ರೇವಣ್ಣಗೆ 376(2)(n) ಸೆಕ್ಷನ್ನಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದ್ದರೆ, 354(b) ಸೆಕ್ಷನ್ ಅಡಿಯಲ್ಲಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, ತಲೆ ತಗ್ಗಿಸುವಂತಾಗಿರುವ ಕುಟುಂಬ ಸದಸ್ಯರಿಗೆ ಭರಿಸಲಾಗದ ಆಘಾತ ಉಂಟಾಗಿದೆ.
ಪ್ರಜ್ವಲ್ ರೇವಣ್ಣಗೆ 376(2)(n) ಸೆಕ್ಷನ್ನಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದ್ದರೆ, 354(b) ಸೆಕ್ಷನ್ ಅಡಿಯಲ್ಲಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಒಂದೆಡೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆಯ ಪ್ರಮಾಣ ಘೋಷಣೆಯಾಗುತ್ತಿದ್ದಂತೆಯೇ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿತ್ತು. ಮಧ್ಯಾಹ್ನದಿಂದ ಟಿವಿ ನೋಡುತ್ತಿದ್ದ ದೇವೇಗೌಡ, ಶಿಕ್ಷೆ ಪ್ರಕಟ ಆಗುತ್ತಿರುವಂತೆಯೇ ಅಘಾತಕ್ಕೊಳಗಾಗಿ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು ಶಿಕ್ಷೆಯಾಗಿದ್ದು, ಇಲ್ಲಿಯವರೆಗೂ ಎದುರಿಸಿದ್ದ ಜೈಲು ವಾಸದ ಅವಧಿಯನ್ನು ಶಿಕ್ಷೆಯ ಅವಧಿ ಎಂದು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಶಿಕ್ಷೆಯ ಪ್ರಮಾಣ ಪ್ರಕಟಗೊಂಡ ಬಳಕವಷ್ಟೇ ಜೈಲು ವಾಸದ ಅವಧಿ ಪ್ರಾರಂಭವಾಗಲಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನು ಪೊಲೀಸರು ಬಂಧಿಸಿರಲಿಲ್ಲ. ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದು ತನಿಖೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



