ಧರ್ಮಸ್ಥಳ ಪ್ರಕರಣ: ಗುರುತಿಸಿದ್ದ ಜಾಗದ ಬದಲಿಗೆ ಮತ್ತೊಂದು ಜಾಗದಲ್ಲಿ SITಗೆ ಮಾನವ ಅಸ್ಥಿಪಂಜರ ಅವಶೇಷ ಪತ್ತೆ!
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರರು ತೋರಿಸಿರುವ ಸಮಾಧಿ ಸ್ಥಳಗಳಲ್ಲಿ ಅಗೆಯುವಿಕೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಪಾಯಿಂಟ್ 11ರ ಪಕ್ಕದಲ್ಲಿ ಬಳಿ ಮಾನವ ಅಸ್ಥಿಪಂಜರ ಅವಶೇಷಗಳು ಕಂಡುಬಂದಿವೆ.

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರರು ತೋರಿಸಿರುವ ಸಮಾಧಿ ಸ್ಥಳಗಳಲ್ಲಿ ಅಗೆಯುವಿಕೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಪಾಯಿಂಟ್ 11ರ ಪಕ್ಕದಲ್ಲಿ ಬಳಿ ಮಾನವ ಅಸ್ಥಿಪಂಜರ ಅವಶೇಷಗಳು ಕಂಡುಬಂದಿವೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಥಳ ಸಂಖ್ಯೆ 11 ರಲ್ಲಿ ಅಗೆಯುವಿಕೆಯನ್ನು ಪುನರಾರಂಭಿಸಲು ಎಸ್‌ಐಟಿ ಅಧಿಕಾರಿಗಳು ಮತ್ತು ದೂರುದಾರರು ಧರ್ಮಸ್ಥಳ ಗ್ರಾಮದ ಹೆದ್ದಾರಿ ಬದಿಯ ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದರು. ಆದರೆ ಗುರುತಿಸಿದ ಸಮಾಧಿ ಸ್ಥಳ ಬಿಟ್ಟು ತಂಡ ಕಾಡಿನೊಳಕ್ಕೆ ಪ್ರವೇಶಿಸಿದ್ದು ಅಲ್ಲಿ ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. ಇನ್ನು ಪಾಯಿಂಟ್ 11ರ ಬಳಿ ಸಮಾಧಿ ಅಗೆದ ಜಾಗದಲ್ಲಿ ಅಸ್ಥಿಪಂಜರ ಸಿಕ್ಕಿದೆಯಾ? ಇಲ್ಲವ? ಎಂಬುದು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ಅಧಿಕಾರಿಗಳಿಂದ ನಿರೀಕ್ಷಿಸಲಾಗಿದೆ.
ಸ್ಥಳದಲ್ಲಿ ಪುರುಷನದ್ದೆಂದು ಶಂಕಿಸಲಾದ ಮಾನವ ಅಸ್ಥಿಪಂಜರ ಅವಶೇಷಗಳು ಹಗ್ಗ ಮತ್ತು ಕೆಲವು ಬಟ್ಟೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸಲು ಅವಶೇಷಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗುವುದು ಮತ್ತು ಪೊಲೀಸರು ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



