ರಾಜ್ಯ

ಸಮುದ್ರದಲ್ಲಿ ಮುಳುಗಿದ ಫಿಶಿಂಗ್ ಬೋಟ್; 7 ಮಂದಿ ಮೀನುಗಾರರ ರಕ್ಷಿಸಿದ ಲೈಫ್ ಜಾಕೆಟ್! ರೋಚಕ Video

ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಪ್ಪುಂದದ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಸಮುದ್ರದಲ್ಲಿ ಮುಳುಗಿದ ಫಿಶಿಂಗ್ ಬೋಟ್; 7 ಮಂದಿ ಮೀನುಗಾರರ ರಕ್ಷಿಸಿದ ಲೈಫ್ ಜಾಕೆಟ್! ರೋಚಕ Video
ಮೀನುಗಾರಿಕಾ ಬೋಟ್ ಪಲ್ಟಿ
Published On :

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಬೋಟ್ ವೊಂದು ಸಮುದ್ರ ರಾಕ್ಷಸ ಅಲೆಗಳಿಗೆ ತುತ್ತಾಗಿ ಪಲ್ಟಿಯಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ.

ಹೌದು.. ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಪ್ಪುಂದದ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ದೋಣಿಯಲ್ಲಿದ್ದ 7 ಜನ ಮೀನುಗಾರರನ್ನು ಪವಾಡಸದೃಶ ರಕ್ಷಣೆ ಮಾಡಲಾಗಿದೆ.

ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಈ ವಿಚಾರ ತಿಳಿಯುತ್ತಲೇ ದೋಣಿಯಲ್ಲಿದ್ದ ಮೀನುಗಾರರನ್ನು ಸ್ಥಳೀಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ರಕ್ಷಣೆ ಮಾಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸಂಭವಿಸಬಹುದಾಗಿದ್ದ ಮತ್ತೊಂದು ದೊಡ್ಡ ದುರಂತ ತಪ್ಪಿದಂತಾಗಿದೆ.

ಜೀವ ಉಳಿಸಿದ ಲೈಫ್ ಜಾಕೆಟ್

ಉಪ್ಪುಂದದ ಮಡಿಕಲ್‌ನಲ್ಲಿ ದೋಣಿ ದುರಂತ ಸಂಭವಿಸಿದ್ದು, ಆಂಧ್ರ ಪ್ರದೇಶ ಮೂಲದ ಏಳು ಮಂದಿ ಮೀನುಗಾರರನ್ನು ಹೊಂದಿದ್ದ ಟ್ರಾಲ್ ಬೋಟ್ ಕಾಪು ಬೀಚ್‍ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಮೀನುಗಾರರು ಮುಂಜಾಗ್ರತಾ ಕ್ರಮವಾಗಿ ಲೈಫ್ ಜಾಕೆಟ್ ಧರಿಸಿದ್ದ ಕಾರಣ ಎಲ್ಲ 9 ಜನ ಮೀನುಗರಾರು ಪ್ರಾಣಪಾಯದಿಂದ ಪಾರಾಗಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.