ಮೈಸೂರು ದಸರಾ 2025: ಮೊದಲ ಹಂತದ ಗಜಪಯಣಕ್ಕೆ ಚಾಲನೆ
ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2025ಕ್ಕೆ ಸೋಮವಾರ ಅಧಿಕೃತ ಚಾಲನೆ ಸಿಕ್ಕಿದೆ.
ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.
ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.
ಈ ಬಾರಿಯೂ 750 ಕೆ.ಜಿ ತೂಕದ ಅಂಬಾರಿಯನ್ನು ಹೊರಲಿರುವ ಅಭಿಮನ್ಯು, ಇಡೀ ತಂಡವನ್ನು ಮುನ್ನಡೆಸಲಿದ್ದಾನೆ. ವಿವಿಧ ಆನೆ ಶಿಬಿರಗಳಿಂದ ಆನೆಗಳನ್ನು ಆಯ್ಕೆ ಮಾಡಿರುವ ಅಧಿಕಾರಿಗಳು ಈಗಾಗಲೇ ಆನೆಗಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಿದ್ದಾರೆ.
ಆನೆ ಶಿಬಿರದಲ್ಲಿರುವ ಹೆಣ್ಣು ಆನೆಗಳ ಗರ್ಭಧಾರಣೆ ಪರೀಕ್ಷೆಗಾಗಿ ರಕ್ತಗಳ ಮಾದರಿ ಸಂಗ್ರಹಿಸಿ ಲ್ಯಾಬ್‌ನಲ್ಲಿ ಪರೀಕ್ಷೆ ಮಾಡಿಸಿ ನಂತರ ಈ ಹೆಣ್ಣಾನೆಗಳನ್ನು ದಸರಾಗೆ ಆಯ್ಕೆ ಮಾಡಲಾಗಿದೆ. ನಾಳೆ ಒಂದು ದಿನ ಮೈಸೂರಿನಲ್ಲಿ ವಿಶ್ರಾಂತಿ ಪಡೆಯಲಿರುವ ಗಜಪಡೆ ಆ.7ರಂದು ಅರಮನೆ ಪ್ರವೇಶ ಮಾಡಲಿವೆ.
ಮೊದಲ ತಂಡದ ಆನೆಗಳ ಪಟ್ಟಿ
1. ಅಭಿಮನ್ಯು, ಗಂಡು : 59 ವರ್ಷ
2. ಪ್ರಶಾಂತ, ಗಂಡು : 53 ವರ್ಷ
3. ಧನಂಜಯ, ಗಂಡು : 45 ವರ್ಷ
4. ಮಹೇಂದ್ರ, ಗಂಡು : 42 ವರ್ಷ
5. ಏಕಲವ್ಯ, ಗಂಡು : 40 ವರ್ಷ
6. ಕಂಜನ್, ಗಂಡು : 26 ವರ್ಷ
7. ಭೀಮ, ಗಂಡು : 25 ವರ್ಷ
8. ಲಕ್ಷ್ಮಿ, ಹೆಣ್ಣು : 54 ವರ್ಷ
9. ಕಾವೇರಿ, ಹೆಣ್ಣು : 45 ವರ್ಷ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



