ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: 11ನೇ ಸ್ಥಳದಲ್ಲಿ ಅಗೆಯುವಿಕೆ ಕಾರ್ಯ ಆರಂಭ

ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಸಾಕ್ಷಿ ದೂರುದಾರ ಈ ಹಿಂದೆ ಗುರುತಿಸಿದ್ದ 11ನೇ ಸ್ಥಳದಲ್ಲಿ ಎಸ್ಐಟಿ ಶೋಧ ಕಾರ್ಯ ಆರಂಭಿಸಿದೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: 11ನೇ ಸ್ಥಳದಲ್ಲಿ ಅಗೆಯುವಿಕೆ ಕಾರ್ಯ ಆರಂಭ
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಶೋಧ ಕಾರ್ಯ — news drum
Published On :

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದ್ದು, ಮೃತದೇಹಗಳ ಅವಶೇಷ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮಂಗಳವಾರ 7ನೇ ದಿನಕ್ಕೆ ಕಾಲಿಟ್ಟಿದೆ.

ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಸಾಕ್ಷಿ ದೂರುದಾರ ಈ ಹಿಂದೆ ಗುರುತಿಸಿದ್ದ 11ನೇ ಸ್ಥಳದಲ್ಲಿ ಎಸ್ಐಟಿ ಶೋಧ ಕಾರ್ಯ ಆರಂಭಿಸಿದೆ.

ಸೋಮವಾರದ ಕಾರ್ಯಾಚರಣೆಯ ವೇಳೆ ದೂರುದಾರನು ಈ ಹಿಂದೆ ತೋರಿಸಿದ್ದ 11ನೇ ಜಾಗಕ್ಕಿಂತ ಮುಂದಕ್ಕೆ ಕಾಡಿನೊಳಗೆ ಎಸ್ಐಟಿ ಅಧಿಕಾರಿಗಳನ್ನು ಕರೆದೊಯ್ದಿದ್ದು, ಅಲ್ಲಿ ನೆಲದ ಮೇಲೆಯೇ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ ಎಂದು ತಿಳಿದುಬಂದಿದೆ.

ಈ ಅಸ್ಥಿಪಂಜರಗಳನ್ನು ತಜ್ಞರ ತಂಡ ವೈಜ್ಞಾನಿಕವಾಗಿ ಸಂಗ್ರಹ ಮಾಡಿದ್ದು, ಅದನ್ನು ಮಣಿಪಾಲದ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಜುಲೈ 19 ರಂದು ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.