ಬೆಳಗಾವಿ: ಮಸೀದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ದಾದಾಪೀರ್ ಬಂಧನ
ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ ಮಸೀದಿ ಒಳಗಿನ ಸಿಸಿಟಿವಿ ದೃಶ್ಯಾವಳಿಯನ್ನು ಪೋಸ್ಟ್ ಮಾಡಿದ ನಂತರ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ: 2023ರ ಅಕ್ಟೋಬರ್ನಲ್ಲಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಮಸೀದಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ತುಫೆಲಹ್ಮದ್ ದಾದಾಪೀರ್ ನಾಗರ್ಚಿ(22)ಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ ಮಸೀದಿ ಒಳಗಿನ ಸಿಸಿಟಿವಿ ದೃಶ್ಯಾವಳಿಯನ್ನು ಪೋಸ್ಟ್ ಮಾಡಿದ ನಂತರ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ.
ಕೆರೆಹಳ್ಳಿ ಟ್ವಿಟರ್ನಲ್ಲಿ ಘಟನೆಯನ್ನು ಬಹಿರಂಗಪಡಿಸಿದ ತಕ್ಷಣ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ.
ಪೊಲೀಸರು ಬಾಲಕಿಯ ಪೋಷಕರನ್ನು ಭೇಟಿಯಾಗಿದ್ದು, ಅವರು ಘಟನೆಯ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ. ಪ್ರಕರಣದಲ್ಲಿ ಪೊಲೀಸರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ವಿಡಿಯೋ ಕ್ಲಿಪ್ ಅನ್ನು ದಾಖಲೆಯಾಗಿ ಬಳಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರು ತಕ್ಷಣ ಕ್ರಮ ಕೈಗೊಂಡು ಮುಧೋಳ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



