ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಹಸಿರು ಮಾರ್ಗದ 4 ನಿಲ್ದಾಣಗಳು ತಾತ್ಕಾಲಿಕ ಬಂದ್..!
ಭದ್ರತೆ ದೃಷ್ಟಿಯಿಂದ ಹಾಗೂ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಕೋರಿಕೆಯ ಮೇರೆಗೆ ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಆಗಮನದ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಸಿರು ಮಾರ್ಗದ ನಾಲ್ಕು ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್ ಆಗಲಿವೆ.
ಈ ಕುರಿತು ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದ್ದು, ಲಾಲ್ ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ, ಆರ್ ವಿ ರಸ್ತೆ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಮುಚ್ಚಲಾಗುತ್ತದೆ ಎಂದು ತಿಳಿಸಿದೆ.
ಭದ್ರತೆ ದೃಷ್ಟಿಯಿಂದ ಹಾಗೂ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಕೋರಿಕೆಯ ಮೇರೆಗೆ ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಹೇಳಿದೆ.
ನಮ್ಮ ಮೆಟ್ರೊ ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆ ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಸೂಚಿಸಲಾಗಿದೆ. ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಹಾಗೂ ಸಾರ್ವಜನಿಕರ ಸಹಕಾರವನ್ನು ಕೋರುತ್ತೇವೆ ಎಂದು ತಿಳಿಸಿದೆ.

ಬೆಂಗಳೂರಿಗಿಂದು ಪ್ರಧಾನಿ ಮೋದಿ: ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ, 3ನೇ ಹಂತಕ್ಕೂ ಶಂಕು ಸ್ಥಾಪನೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


