ರಾಜ್ಯ

PM Modi in Bengaluru: 3 ವಂದೇ ಭಾರತ್ ಎಕ್ಸ್'ಪ್ರೆಸ್ ರೈಲುಗಳಿಗೆ ಚಾಲನೆ; Video

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯವರು ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್'ಗೆ ಆಗಮಿಸಿದರು.

PM Modi in Bengaluru: 3 ವಂದೇ ಭಾರತ್ ಎಕ್ಸ್'ಪ್ರೆಸ್ ರೈಲುಗಳಿಗೆ ಚಾಲನೆ; Video
ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ಪ್ರಧಾನಿ ಮೋದಿ
Published On :

ಬೆಂಗಳೂರು: ಬೆಂಗಳೂರಿಗೆ ಬಂದಿಳಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಭಾನುವಾರ ಚಾಲನೆ ನೀಡಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯವರು ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್'ಗೆ ಆಗಮಿಸಿದರು.

ಅಲ್ಲಿಂದ ರಸ್ತೆ ಮಾರ್ಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿ, ಬೆಳಗಾವಿ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.

ನಂತರ ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಇನ್ನೂ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.