ರಾಜ್ಯ

ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ರದ್ದತಿ ನಿರ್ಣಯ ಅಂಗೀಕಾರ

ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಇಂದು ವಿಧಾಸಭೆಯಲ್ಲಿ ನಿರ್ಣಯ ಮಂಡಿಸಿದರು, ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ರದ್ದತಿ ನಿರ್ಣಯ ಅಂಗೀಕಾರ
ಯುಟಿ ಖಾದರ್
Published On :

ಬೆಂಗಳೂರು: ಕರ್ನಾಟಕ ವಿಧಾನಸಭೆಯು ಸೋಮವಾರ 18 ಬಿಜೆಪಿ ಶಾಸಕರ ಅಮಾನತು ರದ್ದತಿ ನಿರ್ಧಾರವನ್ನು ಅಂಗೀಕರಿಸಿದೆ.

ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಇಂದು ವಿಧಾಸಭೆಯಲ್ಲಿ ನಿರ್ಣಯ ಮಂಡಿಸಿದರು, ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಮೇ 25 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರೊಂದಿಗಿನ ಸಭೆಯ ನಂತರ ಸ್ಪೀಕರ್ ಯು ಟಿ ಖಾದರ್ ಅವರು 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವುದಾಗಿ ಘೋಷಿಸಿದ್ದರು.

ಮಾರ್ಚ್‌ನಲ್ಲಿ ನಡೆದ 6ನೇ ಅಧಿವೇಶನದಲ್ಲಿ 18 ಬಿಜೆಪಿ ಸದಸ್ಯರನ್ನು ಸದನದಿಂದ 6 ತಿಂಗಳ ಕಾಲ ಅಮಾನತುಗೊಳಿಸುವ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಲು ಎಚ್ ಕೆ ಪಾಟೀಲ್ ಅವರು ವಿಧಾನಸಭೆಯ ಅನುಮೋದನೆ ಕೋರುವ ಪ್ರಸ್ತಾವನೆ ಮಂಡಿಸಿದರು.

ನಂತರ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಪ್ರಸ್ತಾವವನ್ನು ಮತಕ್ಕೆ ಹಾಕಿದಾಗ, ಧ್ವನಿಮತದ ಮೂಲಕ ಅನುಮೋದನೆ ಪಡೆಯಲಾಯಿತು.

ಬಿಜೆಪಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮುನಿರತ್ನ, ಬೈರತಿ ಬಸವರಾಜ್, ಎಸ್.ಆರ್.ವಿಶ್ವನಾಥ್, ದೊಡ್ಡನಗೌಡ ಪಾಟೀಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯಾನ್, ಎಂ.ಆರ್.ಪಾಟೀಲ್, ಡಾ.ಭರತ್ ಶೆಟ್ಟಿ, ಬಿ.ಪಿ.ಹರೀಶ್, ದೀರಜ್ ಮುನಿರಾಜು, ಡಾ.ಚಂದ್ರುಲಮಾಣಿ, ಶರಣು ಸಲಗಾರ್, ಬಸವರಾಜ್ ಮತ್ತಿಮೋಡ್ ಸೇರಿದಂತೆ 18 ಶಾಸಕರನ್ನು ಅಮಾನತು ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.