ರಾಜ್ಯ

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸೇವೆ: ಪ್ರಯಾಣಿಕರಿಗೆ 80 ನಿಮಿಷ ಉಳಿತಾಯ

ಬೆಂಗಳೂರು-ಬೆಳಗಾವಿ ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು 611 ಕಿ.ಮೀ. ದೂರವನ್ನು ಕೇವಲ 8.5 ಗಂಟೆಗಳಲ್ಲಿ ಕ್ರಮಿಸಲಿದೆ. ಆ ಮೂಲಕ ಈ ಮಾರ್ಗದಲ್ಲಿ ಸಂಚರಿಸುವ ಅತಿ ವೇಗದ ರೈಲು ಎನಿಸಿಕೊಳ್ಳಲಿದೆ.

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸೇವೆ: ಪ್ರಯಾಣಿಕರಿಗೆ 80 ನಿಮಿಷ ಉಳಿತಾಯ
ವಂದೇ ಭಾರತ್ ರೈಲಿನಲ್ಲಿ ಶಾಲಾ ಮಕ್ಕಳ ಜೊತೆ ಪ್ರಧಾನಿ ಮೋದಿ ಮಾತು
Published On :

ಬೆಂಗಳೂರು: ಭಾರತದ ಹೈಸ್ಪೀಡ್ ರೈಲು ಜಾಲಕ್ಕೆ ಉತ್ತೇಜನ ನೀಡುವ ಸಲುವಾಗಿ, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.

ಬಹು ನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಪ್ರಧಾನಿ ಭೌತಿಕವಾಗಿ ಹಸಿರು ನಿಶಾನೆ ತೋರಿದರ. ಇದರ ಜೊತೆಗೆ ಶ್ರೀ ಮಾತಾ ವೈಷ್ಣೋ ದೇವಿ ಕತ್ರ-ಅಮೃತಸರ ಮತ್ತು ಅಜ್ನಿ (ನಾಗ್ಪುರ)-ಪುಣೆ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸಿದರು. ಧ್ವಜಾರೋಹಣ ಮಾಡುವ ಮೊದಲು ಪ್ರಧಾನಿ ರೈಲಿನೊಳಗೆ ಪ್ರವಾಸ ಕೈಗೊಂಡರು. ಬೆಂಗಳೂರು-ಬೆಳಗಾವಿ ರೈಲಿನಲ್ಲಿದ್ದ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು, ಖುಷಿಯ ಕ್ಷಣಗಳನ್ನು ಹಂಚಿಕೊಂಡರು. ದೊಡ್ಡ ಕನಸು ಕಾಣಲು ಅವರನ್ನು ಪ್ರೋತ್ಸಾಹಿಸಿದರು.

ನಂತರ ಲೋಕೋ ಪೈಲಟ್‌ಗಳನ್ನು ಸಹ ಪ್ರಧಾನಿ ಭೇಟಿಯಾದರು, ದೇಶದ ರೈಲ್ವೆ ವ್ಯವಸ್ಥೆಯನ್ನು ಆಧುನೀಕರಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಶ್ಲಾಘಿಸಿದರು. ಬೆಂಗಳೂರು-ಬೆಳಗಾವಿ ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು 611 ಕಿ.ಮೀ. ದೂರವನ್ನು ಕೇವಲ 8.5 ಗಂಟೆಗಳಲ್ಲಿ ಕ್ರಮಿಸಲಿದೆ. ಆ ಮೂಲಕ ಈ ಮಾರ್ಗದಲ್ಲಿ ಸಂಚರಿಸುವ ಅತಿ ವೇಗದ ರೈಲು ಎನಿಸಿಕೊಳ್ಳಲಿದೆ. ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣದ ಸಮಯವನ್ನು ಸುಮಾರು 1 ಗಂಟೆ 20 ನಿಮಿಷಗಳು ಕಡಿಮೆ ಮಾಡುತ್ತದೆ. ಇತರ ರೈಲುಗಳಿಗೆ ಹೋಲಿಸಿದರೆ 1 ಗಂಟೆ 40 ನಿಮಿಷಗಳಷ್ಟು ಪ್ರಯಾಣ ಕಡಿಮೆ ಮಾಡುತ್ತದೆ.

ಈ ಹೊಸ ರೈಲು ಸೇರ್ಪಡೆಯೊಂದಿಗೆ ಕರ್ನಾಟಕವು ಈಗ 11 ವಂದೇ ಭಾರತ್ ಸೇವೆಗಳನ್ನು ನಿರ್ವಹಿಸುತ್ತಿದೆ. ಹೊಸ ಬೆಂಗಳೂರು-ಬೆಳಗಾವಿ ರೈಲು ಯಶವಂತಪುರ, ತುಮಕೂರು, ದಾವಣಗೆರೆ, ಹಾವೇರಿ ಮತ್ತು ಹುಬ್ಬಳ್ಳಿ ಮೂಲಕ ಸಂಚರಿಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.