ಮೆಜೆಸ್ಟಿಕ್‌ನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ
ರಾತ್ರಿ 10.15 ಗಂಟೆಗೆ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲನ್ನು ನಿಲ್ಲಿಸಿದ್ದಾರೆ.

ಬೆಂಗಳೂರು: ಮೆಜೆಸ್ಟಿಕ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಹಸಿರು ಮಾರ್ಗದ ಕಡೆ ಹೋಗುವ ಟ್ರ್ಯಾಕ್‌ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಪರದಾಡಿದ ಘಟನೆ ಸೋಮವಾರ ನಡೆದಿದೆ.
ರಾತ್ರಿ 10.15 ಗಂಟೆಗೆ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲನ್ನು ನಿಲ್ಲಿಸಿದ್ದಾರೆ. ನಂತರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.
ಘಟನೆ ಬಳಿಕ ಕೆಲ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯಗಳು ಕಂಡು ಬಂದಿತ್ತು. ಇದರಿಂದಾಗಿ ಹಲವಾರು ಪ್ರಯಾಣಿಕರು ಸಂಕಷ್ಟ ಎದುರಿಸಿದರು.
ಬಳಿಕ ಪ್ರಯಾಣಿರಿಗೆ ತೊಂದರೆ ಆಗದಂತೆ ಬಿಎಂಆರ್ಸಿಎಲ್ ನಾಲ್ಕು ಟ್ರಿಪ್‌ಗಳ ಶಾರ್ಟ್ ಲೂಪ್ ರೈಲುಗಳನ್ನು ಓಡಿಸಿದ್ದು, ಪ್ರಯಾಣಿಕರಿಗೆ ಅನುಕೂಲ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



