ರಾಜ್ಯ

Darshan Arrest: ನಟ ದರ್ಶನ್ ಬಂಧನ; Video

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ನಟ ದರ್ಶನ್ ತೊಗುದೀಪ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿದೆ.

Darshan Arrest: ನಟ ದರ್ಶನ್ ಬಂಧನ; Video
ನಟ ದರ್ಶನ್ ಬಂಧನ
Published On :

ಸ್ಯಾಂಡಲ್ ವುಡ್ (Sandalwood) ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ತೂಗುದೀಪ, ಪವಿತ್ರಾ ಗೌಡ (Pavithra Gowda) ಮತ್ತು ಇತರ ಐವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ (Supreme court) ನಿಂದ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದ್ದು ಇದರ ಬೆನ್ನಲ್ಲೆ ಕೊಲೆ ಆರೋಪಿಗಳಾದ ಪವಿತ್ರಾ ಗೌಡ ಮತ್ತು ದರ್ಶನ್ ಅವರನ್ನು ಪೊಲೀಸರು (Bengaluru Police) ಬಂಧಿಸಿದ್ದಾರೆ.

ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಪ್ರಕಟಿಸಿತ್ತು. ಹೀಗಾಗಿ ಬೆಂಗಳೂರು ಪೊಲೀಸರು ಹೊಸಕೆರೆಯಲ್ಲಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಿವಾಸ ಅಪಾರ್ಟ್ ಮೆಂಟ್ 15ನೇ ಮಹಡಿಯಲ್ಲಿರುವ ಫ್ಲ್ಯಾ ಟ್ ನಂಬರ್ 4154ರಲ್ಲಿ ಎ2 ಆರೋಪಿ ದರ್ಶನ್ ಅವರನ್ನು ಇನ್‌ಸ್ಪೆಕ್ಟರ್‌ಗಳಾದ ನಾಗೇಶ್ ಮತ್ತು ಸುಬ್ರಹ್ಮಣ್ಯ ನೇತೃತ್ವದ ತಂಡ ಬಂಧಿಸಿದೆ.

ದರ್ಶನ್ ಬಂಧನಕ್ಕೂ ಮುನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಸುಪ್ರೀಂಕೋರ್ಟ್​ ನಲ್ಲಿ ಇಂದು ರದ್ದಾಗುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ಜುಲೈ 24 ರಂದು ಈ ಹಿಂದಿನ ತೀರ್ಪನ್ನು ಕಾಯ್ದಿರಿಸಿದ್ದ ಸುಪ್ರೀಂ ಕೋರ್ಟ್, ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನಂತರ ಇಂದು ಆದೇಶವನ್ನು ಪ್ರಕಟಿಸಿದೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, ಎ1 ಪವಿತ್ರಾ ಗೌಡ, ಎ2 ದರ್ಶನ್ ತೂಗುದೀಪ, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನು ಕುಮಾರ್ ಅಲಿಯಾಸ್ ಅನು, ಎ14 ಪ್ರದೂಷ, ಎ11 ನಾಗರಾಜ್ ಅಲಿಯಾಸ್ ನಾಗ, ದರ್ಶನ್ ಅವರ ಮ್ಯಾನೇಜರ್ ಮತ್ತು ಎ12 ಲಕ್ಷ್ಮಣ್ ಗೆ ಹೈಕೋರ್ಟ್ ಜಾಮೀನು ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.