ರಾಜ್ಯ

ನಟ ದರ್ಶನ್ ಜಾಮೀನು ರದ್ದು: ಕೂಡಲೇ ಪ್ರತಿಕ್ರಿಯಿಸಿ ನಟಿ ರಮ್ಯಾ ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ.

ನಟ ದರ್ಶನ್ ಜಾಮೀನು ರದ್ದು: ಕೂಡಲೇ ಪ್ರತಿಕ್ರಿಯಿಸಿ ನಟಿ ರಮ್ಯಾ ಹೇಳಿದ್ದೇನು?
ನಟಿ ರಮ್ಯಾ
Published On :

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ ಸೇರಿ 7 ಜನ ಆರೋಪಿಗಳ ಜಾಮೀನು ರದ್ದಾಗಿದೆ. ದರ್ಶನ್ ಜೊತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ನಟಿ ರಮ್ಯಾ ಅವರು ಈ ಕೇಸ್‌ ವಿಚಾರವಾಗಿ ದರ್ಶನ್‌ ಅವರನ್ನು ವಿರೋಧಿಸುತ್ತಲೇ ಬಂದಿದ್ದರು. ಈಗ ಜಾಮೀನು ರದ್ದಾಗುತ್ತಿದ್ದಂತೆ ಪೋಸ್ಟ್ ಹಂಚಿಕೊಂಡಿದ್ದಾರೆ.

ರಮ್ಯಾ ಪೋಸ್ಟ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಉಳಿದವರಿಗೆ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯವು ಸಿಗುತ್ತೆ.ಎಲ್ಲಕ್ಕಿಂತ ಮುಖ್ಯವಾಗಿ, ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಇರಿ” ಎಂದು ರಮ್ಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಅಭಿಮಾನಿಗಳೆಂದು ಗುರುತಿಸಿಕೊಂಡವರು ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ರಮ್ಯಾ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಕ್ರಮ ಕೈಗೊಂಡ ಪೊಲೀಸರು ಹಲವರನ್ನು ಬಂಧಿಸಿದ್ದರು.

Story image

ಜೂನ್ 2024 ರಲ್ಲಿ ಚಿತ್ರದುರ್ಗದಿಂದ ರೇಣುಕಾಸ್ವಾಮಿ ಎನ್ನುವವರನ್ನು ಅಪಹರಿಸಿ ಬೆಂಗಳೂರಿನ ಶೆಡ್‌ನಲ್ಲಿ 3 ದಿನಗಳ ಕಾಲ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಗ್ಯಾಂಗ್ ಮೇಲಿದೆ. ರೇಣುಕಾಸ್ವಾಮಿ ಮೃತಪಟ್ಟಾಗ ಮೃತದೇಹವನ್ನು ಚರಂಡಿಗೆ ಎಸೆಯಲಾಗಿತ್ತು.

ಆ ಬಳಿಕ ಇಬ್ಬರು ಪೊಲೀಸ್‌ ಠಾಣೆಗೆ ಬಂದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಇನ್ನಷ್ಟು ತನಿಖೆ ಮಾಡಿದ ಬಳಿಕ ಕೊಲೆ ವಿಷಯ ಬಹಿರಂಗವಾಗಿತ್ತು. ದರ್ಶನ್, ಪವಿತ್ರಾ ಗೌಡ, ಅನು ಕುಮಾರ್, ಲಕ್ಷ್ಮಣ್ ಎಂ, ಪ್ರದೂಷ್ ಎಸ್ ರಾವ್, ವಿ ವಿನಯ್, ಜಗದೀಶ್, ನಾಗರಾಜು ಆರ್ ಅವರು ಸೇರಿ 11 ಮಂದಿಯ ಬಂಧನವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.