ಮಂಡ್ಯದಲ್ಲಿ ಮೊಟ್ಟೆ ವಿವಾದ: ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗಳಿಗೆ ಮಕ್ಕಳನ್ನು ಸೇರಿಸಿದ ಗ್ರಾಮಸ್ಥರು!
ಎಲ್‌ಕೆಜಿ, ಯುಕೆಜಿ ಸೇರಿ 144 ಮಕ್ಕಳಿರುವ ಶಾಲೆಯ ಬಳಿ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರಸ್ವಾಮಿ ದೇವಾಲಯವಿದೆ ಎಂಬ ಕಾರಣಕ್ಕೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲಾಗುತ್ತಿತ್ತು.

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಕೊಡುವುದನ್ನು ವಿರೋಧಿಸಿದ ಪೋಷಕರು, 84 ಮಕ್ಕಳ ವರ್ಗಾವಣೆ ಪತ್ರ ಪಡೆದಿದ್ದು, ಅಕ್ಕಪಕ್ಕದ ಕೀಲಾರ, ಹನಕೆರೆ, ಬೆಸಗರಹಳ್ಳಿ ಸರ್ಕಾರಿ ಶಾಲೆಗೆ ದಾಖಲಿಸಿದ್ದಾರೆ.
ಎಲ್‌ಕೆಜಿ, ಯುಕೆಜಿ ಸೇರಿ 144 ಮಕ್ಕಳಿರುವ ಶಾಲೆಯ ಬಳಿ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರಸ್ವಾಮಿ ದೇವಾಲಯವಿದೆ ಎಂಬ ಕಾರಣಕ್ಕೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲಾಗುತ್ತಿತ್ತು. ಮಕ್ಕಳಿಗೆ ಮೊಟ್ಟೆ ನೀಡಬೇಕು ಎಂಬ ಕೆಲ ಪೋಷಕರ ಮಾತಿಗೆ ಇತರೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಅವರನ್ನು ಮನವೊಲಿಸುವ ಅಧಿಕಾರಿಗಳ ಪ್ರಯತ್ನ ಫಲ ನೀಡಿಲ್ಲ.
ಮೊಟ್ಟೆ ತಿನ್ನುವುದನ್ನು ನಾವು ವಿರೋಧಿಸುವುದಿಲ್ಲ. ದೇವಾಲಯ ಇರುವುದರಿಂದ ಕೊಡಬಾರದು, ಮನೆಗೇ ಕೊಟ್ಟು ಕಳುಹಿಸಲಿ ಎಂದಿದ್ದೆವು. ಬೇಯಿಸಿ ಕೊಡಬೇಕು ಎಂದು ಕೆಲವರು ಪಟ್ಟುಹಿಡಿದಿದ್ದರು.
ಆಚಾರ ವಿಚಾರಕ್ಕೆ ಅಡೆತಡೆ ಆಗುತ್ತದೆಂದು ನಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದೆವು, ಬ್ಲಾಕ್ ಶಿಕ್ಷಣ ಅಧಿಕಾರಿ ಕೆ ಟಿ ಸೌಭಾಗ್ಯ ಪೋಷಕರ ಮನವೊಲಿಸಲು ಪ್ರಯತ್ನಿಸಿದರು, ಆದರೆ ವ್ಯರ್ಥವಾಯಿತು. ಎಂದು ಎಸ್‌ಡಿಎಂಸಿ ಸದಸ್ಯ ಚಂದ್ರು ಆಲಕೆರೆ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



