ರಾಜ್ಯ

ಬೆಂಗಳೂರಿನಲ್ಲಿ ವಾರಾಂತ್ಯದವರೆಗೂ ಭಾರೀ ಮಳೆ: Yellow ಅಲರ್ಟ್ ಘೋಷಣೆ

ಬೆಂಗಳೂರಿನಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ.

ಬೆಂಗಳೂರಿನಲ್ಲಿ ವಾರಾಂತ್ಯದವರೆಗೂ ಭಾರೀ ಮಳೆ: Yellow ಅಲರ್ಟ್ ಘೋಷಣೆ
ಹೈ ಗ್ರೌಂಡ್ಸ್ ವೃತ್ತದ ಬಳಿ ಮಳೆಯ ನಡುವೆ ರಸ್ತೆ ದಾಟುತ್ತಿರುವ ಮಹಿಳೆ.
Published On :

ಬೆಂಗಳೂರು: ಬುಧವಾರ ದಿನವಿಡೀ ಸುರಿದ ಮಳೆಯಿಂದಾಗಿ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇಂದೂ ಕೂಡ ಮೋಡ ಕವಿದ ವಾತಾವರಣ ಮುಂದವರೆದಿದ್ದು, ವಾರಾಂತ್ಯದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಗರದಲ್ಲಿ ಬುಧವಾರ ಸುರಿದ ಮಳೆಗೆ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದವು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು.

ಮಳೆ ಹಾಗೂ ನೀರು ತುಂಬಿದ್ದ ಪರಿಣಾಮ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಧಾನವಾಗಿತ್ತು. ನೀರಿನಿಂದ ತುಂಬಿದ ಅಂಡರ್‌ಪಾಸ್‌ಗಳಲ್ಲಿ ಸಂಚರಿಸಲು ಸವಾರರು ಹೆಣಗಾಡುವಂತಾಗಿತ್ತು. ಪಾದಚಾರಿಗಳೂ ಕೂಡ ಓಡಾಡಲು ಸಮಸ್ಯೆಗಳನ್ನು ಎದುರಿಸಿದರು.

ಮುಂದಿನ 36 ಗಂಟೆಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಇದು ವಾರಾಂತ್ಯದವರೆಗೆ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದ್ದು, ಎಲ್ಲೋ ಅಲರ್ಟ್ ಘೋಷಿಸಿದೆ.

ಬಂಗಾಳಕೊಲ್ಲಿಯ ಪಶ್ಚಿಮ-ಮಧ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಅಥವಾ ಕಡಿಮೆ ತೀವ್ರತೆ ಎದುರಾಗಿದೆ. ಇದರ ಪರಿಣಾಮವಾಗಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಅವಧಿಗೆ ಮಳೆ ಆರ್ಭಟ ಇರಲಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಗುರುವಾರ ಮತ್ತು ಶುಕ್ರವಾರ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಕನಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.