Dharmasthala Case: ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪೋಸ್ಟ್; ಆರೋಪಿ ಬಂಧನ
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಮಾಸ್ಕ್ ಮ್ಯಾನ್ ದೂರು ನೀಡಿದ್ದು ಇದರ ಬೆನ್ನಲ್ಲೇ ಅಸ್ಥಿಪಂಜರ ಶೋಧ ಕಾರ್ಯಾಚರಣೆಯೂ ನಡೆಯುತ್ತಿದೆ.

ಚಿಕ್ಕಮಗಳೂರು: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಮಾಸ್ಕ್ ಮ್ಯಾನ್ ದೂರು ನೀಡಿದ್ದು ಇದರ ಬೆನ್ನಲ್ಲೇ ಅಸ್ಥಿಪಂಜರ ಶೋಧ ಕಾರ್ಯಾಚರಣೆಯೂ ನಡೆಯುತ್ತಿದೆ. ಇದರ ಮಧ್ಯೆ ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪೋಸ್ಟ್ ಮಾಡಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರಿನ ಅಜ್ಜಂಪುರ ಠಾಣೆ ಪೊಲೀಸರು ಹೊಸಹಳ್ಳಿಯ ಉಮೇಶ್ ಎಂಬಾತನನ್ನು ಬಂಧಿಸಿದ್ದಾರೆ. ಉಮೇಶ್ ಗೌಡ್ಲಾರ್ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಜೈನ ಸಮಾಜದ ಹೆಣ್ಣು ಮಕ್ಕಳ ಕುರಿತು ಅಶ್ಲೀಲ ಕಾಮೆಂಟ್ ಹಾಕಿದ್ದನು. ಈ ಬಗ್ಗೆ ಕಳಸ ಮೂಲದ ಪದ್ಮರಾಜಯ್ಯ ಎಂಬುವರು ಉಮೇಶ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಅಜ್ಜಂಪುರ ಪೊಲೀಸರು ಉಮೇಶ್ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪಿ ಉಮೇಶ್ ನನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



